ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 01-09-2021

ಯಾದಗಿರ ಗ್ರಾಮೀಣ ಪೊಲೀಸ್ ಠಾಣೆ
ಗುನ್ನೆ ನಂ: 120/2021 ಕಲಂ 279, 337, 338 ಐಪಿಸಿ : ದಿನಾಂಕ 30/08/2021 ರಂದು ಬೆಳಿಗ್ಗೆ 10-00 ಗಂಟೆಗೆ ಫಿರ್ಯಾಧಿದಾರನು ಮತ್ತು ಅವನ ಅಳಿಯ ಇಬ್ಬರೂ ಕೂಡಿಕೊಂಡು ತನ್ನ ಮೋಟಾರ ಸೈಕಲ್ ನಂ ಕೆ.ಎ-33-ಯು-5363 ನೆದ್ದರ ಮೇಲೆ ಹತ್ತಿಕುಣಿ ಡ್ಯಾಮ ನೋಡಿ ಅಲ್ಲಿಂದ ಸೌದಾಗರ ಡ್ಯಾಮ್ ನೋಡಲು ಹೋಗುವಾಗ ಮಾರ್ಗಮಧ್ಯ ಆರೋಪಿತನು ತನ್ನ ಮೋಟಾರ ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಓಡಿಸಿಕೊಂಡು ಹತ್ತಿಕುಣಿ-ಸೆಡಂ ರೋಡಿನ ಮೇಲೆ ಹೋಗುವಾಗ ಎದುರುಗಡೆ ನಾಯಿ ಅಡ್ಡ ಬಂದುದ್ದರಿಂದ ಆರೋಪಿತನು ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಮೋಟಾರ ಸೈಕಲ್ ಸ್ಕಿಡ್ ಆಗಿ ಕೆಳಗಡೆ ಬಿದ್ದುದ್ದರಿಂದ ಫಿರ್ಯಾಧಿಗೆ ಮತ್ತು ಅವನ ಅಳಿಯನಿಗೆ ಭಾರಿ ರಕ್ತಗಾಯ, ಗುಪ್ತಗಾಯ ಮತ್ತು ತರಚಿದ ಗಾಯವಾಗಿರುತ್ತದೆ ಅಂತಾ ಪ್ರಕರಣ ದಾಖಲು ಮಾಡಿದ್ದು ಇರುತ್ತದೆ.

 

 

ಸೈದಾಪೂರ ಪೊಲೀಸ್ ಠಾಣೆ
ಗುನ್ನೆ ನಂ: 135/2021 ಕಲಂ 78 (3) ಕೆ.ಪಿ ಕಾಯ್ದೆ : ದಿನಾಂಕ: 31-08-2021 ರಂದು ಸಾಯಂಕಾಲ 04-15 ಗಂಟೆಗೆ ಪಿ.ಐ ರವರು ಠಾಣೆಗೆ ಹಾಜರಾಗಿ ಕೂಡ್ಲೂರ ಗ್ರಾಮದ ಅಡವಿಸಿದ್ದೇಶ್ವರ ಮಠದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೋಡಗಿದ ಆರೋಪಿತನಿಗೆ ದಾಳಿಮಾಡಿ ಪಂಚರ ಸಮಕ್ಷಮದಲ್ಲಿ ಹಿಡಿದುಕೊಂಡು ಅವನಿಂದ ನಗದು ಹಣ 520=00 ರೂಪಾಯಿಗಳು, ಮಟಕಾ ಬರೆದ ಚೀಟಿ ಪೆನ್ನು ಜಪ್ತಿ ಮಾಡಿಕೊಂಡು. ಬಂದು ಜಪ್ತಿ ಪಂಚನಾಮೆ ಆರೋಪಿತನನ್ನು ಮತ್ತು ಮುದ್ದೆಮಾಲುಗಳನ್ನು ಹಾಜರುಪಡಿಸಿದ್ದು ಸದರಿ ಜಪ್ತಿ ಪಂಚನಾಮೆಯ ಸಾರಂಶದ ಆಧಾರದ ಮೇಲಿಂದ ಠಾಣಾ ಗುನ್ನೆ ನಂ.135/2021 ಕಲಂ.78(3) ಕೆ.ಪಿ ಕಾಯ್ದೆ ನೆದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡೆನು.

 


ಸೈದಾಪೂರ ಪೊಲೀಸ್ ಠಾಣೆ
ಗುನ್ನೆ ನಂ: 136/2021, ಕಲಂ. 143,323,354, 504.506. ಸಂ.149 ಐ ಪಿ ಸಿ : ದಿನಾಂಕ: 31-08-2021 ರಂದು ಸಾಯಂಕಾಲ 06-00 ಗಂಟೆಗೆ ಪಿಯರ್ಾಧಿದಾರಳು ಠಾಣೆಗೆ ಹಾಜರಾಗಿ ಪಿಯರ್ಾಧಿ ನೀಡಿದ ಸಾರಂಶವೆನೆಂದರೆ ದಿನಾಂಕ: 26-08-2021 ರಂದು ಸಾಯಂಕಾಲ 06-00 ಗಂಟೆ ಸುಮಾರಿಗೆ ನಾನು ನಮ್ಮ ಮನೆಯ ಹತ್ತಿರ ಇರುವಾಗ ಆರೋಪಿತರೆಲ್ಲರು ಕೂಡಿಕೊಂಡು ಬಂದು ಲೇ ಸುಳೆ ಮಗಳೆ ನಿನ್ನದು ಸೋಕ್ಕು ಬಹಳ ಆಗಿದೆ ಯಾವಾಗ ನೋಡಿದರು ನಮಗೆ ಹೋಗುವದಕ್ಕೆ ಬರುವದಕ್ಕೆ ದಾರಿ ಸಂಬಂದ ಕೀರಿ ಕೀರಿ ಮಾಡುತಿ ಬೋಸಡಿ ರಂದಿ ಅಂತಾ ಅವಾಚ್ಯವಾಗಿ ಬೈದು ಕೈಯಿಂದ ಹೊಡೆ ಬಡೆ ಮಾಡಿ ಮೈಮೇಲಿನ ಬಟ್ಟೆ ಹಿಡಿದು ಎಳದಾಡಿ ಅವಮಾನ ಮಾಡಿ ಇನ್ನೊಂದು ಸಲ ನಮಗೆ ಎನಾದರೂ ಅಂದರೆ ನಿನಗೆ ಜೀವ ಸಹಿತ ಬಿಡುವದಿಲ್ಲ ಅಂತಾ ಅವಾಚ್ಯವಾಗಿ ಬೈದು ಜೀವದ ಬೇದರಿಕೆ ಹಾಕಿದ ಬಗ್ಗೆ.

 

ಗುರಮಿಠಕಲ್ ಪೊಲೀಸ ಠಾಣೆ
ಗುನ್ನೆ ನಂ: 142/2021 ಕಲಂ 304(ಎ) ಸಂ 149 ಐಪಿಸಿ : ಗುರುಮಠಕಲ್ ಕಂದಾಯ ವಿಭಾಗ ವ್ಯಾಪ್ತಿಗೊಳಪಡುವ ನಜರಾಪೂರ ಗ್ರಾಮ ಸೀಮಾಂತರದಲ್ಲಿ ದಬದಬಿ ಜಲಪಾತವಿದೆ. ಮಳೆಗಾಲದಲ್ಲಿ ಸದರಿ ಜಲಪಾತವನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಕಳೆದ ವರ್ಷ ಜಲಪಾತ ವೀಕ್ಷಣೆಗೆ ಬಂದ ಸಮಯದಲ್ಲಿ ಜಲಪಾತ ನೀರಿನ ಸೆಳವಿಗೆ ಸಿಲುಕಿ ಇಬ್ಬರೂ ವ್ಯಕ್ತಿಗಳು ಮೃತಪಟ್ಟ ಘಟನೆಗಳು ಸಂಭವಿಸಿದ ನಂತರ ಜಲಪಾತದ ಹತ್ತಿರ ಸುರಕ್ಷಾ ಕ್ರಮಗಳು ಕೈಗೊಂಡು ಕಾವಲು ಕುರಿತು ಅರಣ್ಯ ಸಿಬ್ಬಂದಿಯವರನ್ನು ನೇಮಿಸಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳುವ ಕುರಿತು ಸಂಬಂಧಪಟ್ಟ ಅರಣ್ಯ ಸಂರಕ್ಷಣ ಅಧಿಕಾರಿಗಳಿಗೆ ಮಾನ್ಯ ತಹಸೀಲ್ದಾರರು ಹಾಗೂ ತಾಲ್ಲೂಕಾ ದಂಡಾಧಿಕಾರಿಗಳು ಗುರುಮಠಕಲ್ ರವರು ಪತ್ರದ ಮೂಲಕ ಸೂಚಿಸಿರುತ್ತಾರೆ. ಅಲ್ಲದೆ ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ಸಂಬಂಧಪಟ್ಟ ಅರಣ್ಯ ಸಂರಕ್ಷಣ ಅಧಿಕಾರಿಗಳಿಗೆ ಸೂಚಿಸಿದರೂ ಸಹ ಸಂಬಂಧಪಟ್ಟ ಅರಣ್ಯ ಸಂರಕ್ಷಣ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.ದಿನಾಂಕ 29.08.2021 ರಂದು ದಬದಬಿ ಜಲಪಾತ ವೀಕ್ಷಣೆಗೆಂದು ತನ್ನ ಸ್ನೇಹಿತರೊಟ್ಟಿಗೆ ಜಲಪಾತಕ್ಕೆ ಹೋಗಿದ್ದ ಸೈಯದ ಹಜರ ತಂದೆ ಸೈಯದ ಇಕ್ಬಾಲ್ ವಯಾ|| 34 ವರ್ಷ ಜಾ|| ಮುಸ್ಲಿಂ, ಉ|| ವಾಟರ್ ಸವರ್ಿಸಿಂಗ್, ಸಾ|| ಕಲ್ಬುಗರ್ಿ ನಗರ ಈತನು ಜಲಪಾತದ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿರುತ್ತಾನೆ. ಗುರುಮಠಕಲ್ ಪೊಲೀಸ್ ಠಾಣೆ ಯು.ಡಿ.ಆರ್ ನಂಬರ 11/2021 ಕಲಂ 174 ಸಿ.ಆರ್.ಪಿ.ಸಿ ಪ್ರಕಾರ ಪ್ರಕರಣ ವರದಿಯಾಗಿದೆ. ಮಾನ್ಯ ತಹಸೀಲ್ದಾರರು ಮತ್ತು ಮಾನ್ಯ ಜಿಲ್ಲಾಧಿಕಾರಿಗಳು ಜಲಪಾತದ ಹತ್ತಿರ ಸುರಕ್ಷಾ ಕ್ರಮಗಳು ಕೈಗೊಳ್ಳುವಂತೆ ನಿದರ್ೇಶಿಸಿದರೂ ಸಹ ಅರಣ್ಯ ಸಂರಕ್ಷಣೆ ಅಧಿಕಾರಿಗಳು ಯಾವುದೇ ಸುರಕ್ಷಾ ಕ್ರಮಗಳು ಕೈಗೊಳ್ಳದೆ ನಿರ್ಲಕ್ಷ ವಹಿಸಿದ ಬಗ್ಗೆ ಫಿಯರ್ಾದಿ ವಗೈರೆ ಇರುತ್ತದೆ.

 

 

ನಾರಾಯಣಪೂರ ಪೊಲೀಸ ಠಾಣೆ
ಗುನ್ನೆ ನಂ: 53/2021 ಕಲಂ: 78 (3) ಕೆ.ಪಿ ಯಾಕ್ಟ್ : ದಿನಾಂಕ 31/08/2021 ರಂದು 1:30 ಪಿ.ಎಂ ಕ್ಕೆ ಸರಕಾರಿ ತಪರ್ೆ ಶ್ರೀ ಸಿದ್ದೇಶ್ವರ ಗೆರಡೆ ಪಿ.ಎಸ್.ಐ ನಾರಾಯಣಪೂರ ಪೊಲೀಸ್ ಠಾಣೆ ರವರು ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಜ್ಞಾಪನ ಪತ್ರ ಹಾಜರು ಪಡಿಸಿದ್ದು, ಸದರಿ ಜ್ಞಾಪನ ಪತ್ರದ ಸಾರಾಂಶವೆನೆಂದರೆ ತಾವು ಠಾಣೆಯಲ್ಲಿ ಇದ್ದಾಗ 11:00 ಎ.ಎಂ ಕ್ಕೆ ನಾರಾಯಣಪೂರ ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪೂರ ಗ್ರಾಮದ ಅಂಬೇಡ್ಕರ ವೃತ್ತದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ 1/- ರೂ 80/- ರೂ ಕೊಡುತ್ತೆನೆ ಅಂತಾ ಸಾರ್ವಜನಿಕರಿಗೆ ಮಟಕಾ ಸಂಖ್ಯೆ ಬರೆದುಕೊಡುತ್ತಿರುವದಾಗಿ ಮಾಹಿತಿ ಬಂದಿದ್ದು, ಸದರಿ ಪ್ರಕರಣವು ಅಸಂಜ್ಞೇಯ ಅಪರಾಧವಾಗಿದ್ದರಿಂದ ಸದರಿ ಆರೋಪಿತನ ಮೇಲೆ ಗುನ್ನೆ ದಾಖಲಿಸಿಕೊಳ್ಳಲು ಮತ್ತು ಸದರಿ ಸ್ಥಳಕ್ಕೆ ಹೋಗಿ ದಾಳಿ ಮಾಡಿ ತನಿಖೆ ಕೈಕೊಳ್ಳಲು ಪರವಾನಿಗೆ ನೀಡುವಂತೆ ಮಾನ್ಯ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದು, ಮಾನ್ಯ ನ್ಯಾಯಾಲಯವು ಪರವಾನಿಗೆ ನೀಡಿದ್ದು ಮಾನ್ಯ ನ್ಯಾಯಾಲಯದಿಂದ ಪರವಾನಿಗೆಯನ್ನು ಪಡೆದುಕೊಂಡು ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರಿಂದ ಸದರಿ ಜ್ಞಾಪನ ಪತ್ರದ ಸಾರಾಂಶದ ಮೇಲಿಂದ ಠಾಣೆಯ ಗುನ್ನೆ ನಂ. 53/2021 ಕಲಂ 78(3) ಕೆ.ಪಿ ಆಕ್ಟ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು.
ನಂತರ ಮಾನ್ಯ ಪಿಎಸ್ಐ ಸಾಹೇಬರು 3:30 ಪಿ.ಎಮ್ ಕ್ಕೆ ಮರಳಿ ಠಾಣೆಗೆ ಬಂದು ಒಬ್ಬ ಆರೋಪಿ ಹಾಗೂ ಒಂದು ಬಾಲ್ ಪೆನ್, ಒಂದು ಮಟಕಾ ಅಂಕಿ ಸಂಖ್ಯೆಗಳನ್ನು ಬರೆದ ಚೀಟಿ ಹಾಗೂ ನಗದು ಹಣ 1010/-ರೂ ಗಳನ್ನು ಜಪ್ತಿ ಪಡಿಸಿಕೊಂಡು ಜಪ್ತಿ ಪಂಚನಾಮೆಯೊಂದಿಗೆ ಮುಂದಿನ ತನಿಖೆ ಕೈಕೊಳ್ಳುವಂತೆ ಜ್ಞಾಪನ ಪತ್ರ ನೀಡಿದ್ದು ಇರುತ್ತದೆ.ಆರೋಪಿಯ ಹೆಸರು & ವಿಳಾಸ ಈ ಕೆಳಗಿನಂತೆ ಇರುತ್ತವೆ ಅಂತಾ ಮಾನ್ಯರಲ್ಲಿ ಮಾಹಿತಿ ಸಲ್ಲಿಸಲಾಗಿದೆ. ವಿನಾಯಕ ತಂದೆ ಮೋತಿಲಾಲ ಪವಾರ ವ:21 ವರ್ಷ ಜಾ:ಸಾವಜಿ ಉ:ವ್ಯಾಪಾರ ಸಾ:ರೊಡಲಬಂಡಾ ಕ್ಯಾಂಪ ತಾ:ಲಿಂಗಸೂರ ಜಿ:ರಾಯಚೂರ.

 

ನಾರಾಯಣಪೂರ ಪೊಲೀಸ ಠಾಣೆ
ಗುನ್ನೆ ನಂ: 54/2021 ಕಲಂ: 78 (3) ಕೆ.ಪಿ ಯಾಕ್ಟ್ : ದಿನಾಂಕ 31/08/2021 ರಂದು 6:30 ಪಿ.ಎಂ ಕ್ಕೆ ಸರಕಾರಿ ತಪರ್ೆ ಶ್ರೀ ಸಿದ್ದೇಶ್ವರ ಗೆರಡೆ ಪಿ.ಎಸ್.ಐ ನಾರಾಯಣಪೂರ ಪೊಲೀಸ್ ಠಾಣೆ ರವರು ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಜ್ಞಾಪನ ಪತ್ರ ಹಾಜರು ಪಡಿಸಿದ್ದು, ಸದರಿ ಜ್ಞಾಪನ ಪತ್ರದ ಸಾರಾಂಶವೆನೆಂದರೆ ತಾವು ಠಾಣೆಯಲ್ಲಿ ಇದ್ದಾಗ 4:45 ಪಿ.ಎಂ ಕ್ಕೆ ನಾರಾಯಣಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರಟ್ಟಿ ಗ್ರಾಮದ ಶ್ರೀ ವಾಲ್ಮಿಕಿ ವೃತ್ತದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ 1/- ರೂ 80/- ರೂ ಕೊಡುತ್ತೆನೆ ಅಂತಾ ಸಾರ್ವಜನಿಕರಿಗೆ ಮಟಕಾ ಸಂಖ್ಯೆ ಬರೆದುಕೊಡುತ್ತಿರುವದಾಗಿ ಮಾಹಿತಿ ಬಂದಿದ್ದು, ಸದರಿ ಪ್ರಕರಣವು ಅಸಂಜ್ಞೇಯ ಅಪರಾಧವಾಗಿದ್ದರಿಂದ ಸದರಿ ಆರೋಪಿತನ ಮೇಲೆ ಗುನ್ನೆ ದಾಖಲಿಸಿಕೊಳ್ಳಲು ಮತ್ತು ಸದರಿ ಸ್ಥಳಕ್ಕೆ ಹೋಗಿ ದಾಳಿ ಮಾಡಿ ತನಿಖೆ ಕೈಕೊಳ್ಳಲು ಪರವಾನಿಗೆ ನೀಡುವಂತೆ ಮಾನ್ಯ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದು, ಮಾನ್ಯ ನ್ಯಾಯಾಲಯವು ಪರವಾನಿಗೆ ನೀಡಿದ್ದು ಮಾನ್ಯ ನ್ಯಾಯಾಲಯದಿಂದ ಪರವಾನಿಗೆಯನ್ನು ಪಡೆದುಕೊಂಡು ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರಿಂದ ಸದರಿ ಜ್ಞಾಪನ ಪತ್ರದ ಸಾರಾಂಶದ ಮೇಲಿಂದ ಠಾಣೆಯ ಗುನ್ನೆ ನಂ. 54/2021 ಕಲಂ 78(3) ಕೆ.ಪಿ ಆಕ್ಟ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು.
ನಂತರ ಮಾನ್ಯ ಪಿಎಸ್ಐ ಸಾಹೇಬರು 9:30 ಪಿ.ಎಮ್ ಕ್ಕೆ ಮರಳಿ ಠಾಣೆಗೆ ಬಂದು ಒಬ್ಬ ಆರೋಪಿ ಹಾಗೂ ಒಂದು ಬಾಲ್ ಪೆನ್, ಒಂದು ಮಟಕಾ ಅಂಕಿ ಸಂಖ್ಯೆಗಳನ್ನು ಬರೆದ ಚೀಟಿ ಹಾಗೂ ನಗದು ಹಣ 2290/-ರೂ ಗಳನ್ನು ಜಪ್ತಿ ಪಡಿಸಿಕೊಂಡು ಜಪ್ತಿ ಪಂಚನಾಮೆಯೊಂದಿಗೆ ಮುಂದಿನ ತನಿಖೆ ಕೈಕೊಳ್ಳುವಂತೆ ಜ್ಞಾಪನ ಪತ್ರ ನೀಡಿದ್ದು ಇರುತ್ತದೆ.
ಆರೋಪಿಯ ಹೆಸರು & ವಿಳಾಸ ಈ ಕೆಳಗಿನಂತೆ ಇರುತ್ತವೆ ಅಂತಾ ಮಾನ್ಯರಲ್ಲಿ ಮಾಹಿತಿ ಸಲ್ಲಿಸಲಾಗಿದೆ.
ನಿಂಗಪ್ಪ ತಂದೆ ಯಮನಪ್ಪ ಶೆಟ್ಟಿ ವ:34 ವರ್ಷ ಉ:ಕೂಲಿ ಕೆಲಸ ಜಾ:ಹಿಂದು ಉಪ್ಪಾರ ಸಾ:ಬಪ್ಪರಗಿ ತಾ:ಹುಣಸಗಿ

 

 


ಕೆಂಭಾವಿ ಪೊಲೀಸ ಠಾಣೆ
ಗುನ್ನೆ ನಂ: 125/2021 ಕಲಂ 15[ಎ],32[3] ಕೆ. ಇ ಯಾಕ್ಟ : ಇಂದು ದಿನಾಂಕ:31.08.2021 ರಂದು 07 ಪಿಎಮ್ಕ್ಕೆ ಶ್ರೀ ಗಜಾನಂದ ಬಿರಾದಾರ ಪಿಎಸ್ಐ [ಕಾಸು] ಕೆಂಭಾವಿ ಪೊಲೀಸ್ ಠಾಣೆರವರು ಠಾಣೆಗೆ ಹಾಜರಾಗಿ ಕೊಟ್ಟ ವರದಿ ಸಾರಂಶವೇನೆಂದರೆ, ಇಂದು ದಿನಾಂಕ: 31.08.2021 ರಂದು ಸಾಯಂಕಾಲ 4:00 ಗಂಟೆ ಸುಮಾರಿಗೆ ನಾನು ಠಾಣೆಯಲ್ಲಿದ್ದಾಗ ವಂದಗನೂರ ಗ್ರಾಮದ ಬಸ್ ನಿಲ್ದಾಣ ಹತ್ತಿರ ಒಂದು ಅಂಗಡಿಯ ಪಕ್ಕದಲ್ಲಿ ಹುಲಿಗೆಪ್ಪ ತಂದೆ ಲಕ್ಷ್ಮಣ ಹೊಸಮನಿ ಸಾ|| ವಂದಗನೂರ ಈತನು ಸಾರ್ವಜನಿಕ ಸ್ಥಳದಲ್ಲಿ ಸರಕಾರದ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಧ್ಯವನ್ನು ಮಾರಾಟ ಮಾಡಿ ಮಧ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದಾನೆಂದು ಮಾಹಿತಿ ಬಂದ ಮೇರೆಗೆ ನಾನು ಠಾಣೆಗೆ ಇಬ್ಬರು ಪಂಚರಾದ 1) ಮಡಿವಾಳಪ್ಪ ತಂದೆ ಕೆಂಚಪ್ಪ ದೊಡಮನಿ ವಯಾ|| 37 ಜಾ|| ಪ.ಜಾತಿ ಉ||ಕೂಲಿ ಸಾ|| ಕೆಂಭಾವಿ 2) ಮಕ್ತುಮ ತಂದೆ ಮಾಸುಮಸಾಬ ವಡಕೇರಿ ವಯಾ|| 36 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಇವರನ್ನು ಬರಮಾಡಿಕೊಂಡು ಅವರಿಗೂ ಮಾಹಿತಿ ತಿಳಿಸಿ ದಾಳಿ ಮಾಡಲು ಸಹಕರಿಸಲು ತಿಳಿಸಿದ್ದು ಅವರು ಒಪ್ಪಿದ್ದರಿಂದ ನಾನು ಮತ್ತು ಠಾಣೆಯಲ್ಲಿದ್ದ ಹೆಚ್ಸಿ 33 ಶಂಕರಗೌಡ, ಸೈಯದ್ ಪಿಸಿ 106 ರವರನ್ನು ಕರೆದುಕೊಂಡು ಸರಕಾರಿ ಜೀಪ ನಂಬರ ಕೆಎ-33 ಜಿ-0228 ನೇದ್ದರಲ್ಲಿ ಠಾಣೆಯಿಂದ 04.15 ಪಿಎಮ್ಕ್ಕೆ ಹೊರಟು 5 ಪಿಎಮ್ಕ್ಕೆ ವಂದಗನೂರ ಬಸ್ಸ ನಿಲ್ದಾಣದ ಹತ್ತಿರ ಹೋಗಿ ಜೀಪ್ ನಿಲ್ಲಿಸಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ಸ್ಥಳದಿಂದ ಸುಮಾರು 100 ಅಡಿ ದೂರದಲ್ಲಿ ನಿಂತು ಮದ್ಯ ಮಾರಾಟ ಮಾಡುವದನ್ನು ನೋಡಿ ಖಚಿತಪಡಿಸಿಕೊಂಡು ನಾನು, ಪಂಚರು ಹಾಗೂ ಸಿಬ್ಬಂದಿಯೊಂದಿಗೆ ಹೋಗುತ್ತಿದ್ದಾಗ ನಮ್ಮನ್ನು ನೋಡಿ ಅಲ್ಲಿ ಸೇರಿದ್ದ ಜನರು ಓಡಿ ಹೋದರು. ಮಧ್ಯ ಮಾರಾಟ ಮಾಡುತ್ತಿದ್ದವನು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ನಾನು ಸಿಬ್ಬಂದಿಯವರ ಸಹಾಯದಿಂದ ಪಂಚರ ಸಮಕ್ಷಮದಲ್ಲಿ 05.05 ಪಿ ಎಮ್ ಕ್ಕೆ ಸದರಿ ವ್ಯಕ್ತಿಯನ್ನು ಹಿಡಿದು ಆತನ ಹೆಸರು ಮತ್ತು ವಿಳಾಸವನ್ನು ವಿಚಾರಿಸಲಾಗಿ ಹುಲಗಪ್ಪ ತಂದೆ ಲಕ್ಷ್ಮಣ ಹೊಸಮನಿ ವ|| 19 ಜಾ|| ಹಿಂದೂ ಮಾದರ ಉ|| ಕೂಲಿ ಸಾ|| ವಂದಗನೂರ ತಾ|| ಸುರಪೂರ ಅಂತ ತಿಳಿಸಿದನು. ನಂತರ ಸದರಿ ಸ್ಥಳದಲ್ಲಿದ್ದ ಒಂದು ಹಳೆಯ ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಿ ನೋಡಲಾಗಿ ಅದರಲ್ಲಿ ಮಧ್ಯ ತುಂಬಿದ್ದು ಸದರ ಚೀಲದಲ್ಲಿ 180 ಎಮ್ಎಲ್ನ ಓರಿಜಿನಲ್ ಚ್ವಾಯೀಸ್ ವಿಸ್ಕಿ ಪೌಚು ಒಟ್ಟು 08 ಪೌಚುಗಳು ಇದ್ದು ಒಂದು ಪೌಚಿನ ಬೆಲೆ 70.26 ಪೈಸೆ ಅಂತ ಇದ್ದು ಒಟ್ಟು 08 ಪೌಚ್ಗಳ ಬೆಲೆ 562.08/- ರೂ ಆಗುತ್ತಿದ್ದು ನಂತರ ಹುಲಗಪ್ಪ ಈತನನ್ನು ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಮಾರಾಟ ಹಾಗೂ ಸೇವನೆಗೆ ಅವಕಾಶ ಮಾಡಿಕೊಡಲು ಯಾವುದಾದರು ಅಧಿಕೃತ ಪರವಾನಿಗೆ ಇದೆಯೇ ಎಂದು ವಿಚಾರಿಸಲಾಗಿ ತನ್ನ ಬಳಿ ಯಾವುದೇ ಪರವಾನಿಗೆ ಇಲ್ಲವೆಂದು ತಿಳಿಸಿದನು. ಸದರಿ ಮಧ್ಯ ತುಂಬಿದ 180 ಎಮ್ಎಲ್ನ 08 ಪೌಚ್ಗಳನ್ನು 05.05 ಪಿಎಮ್ದಿಂದ 06.05 ಪಿಎಮ್ದವರೆಗೆ ಪಂಚರ ಸಮಕ್ಷಮ ಪಂಚನಾಮೆ ಮೂಲಕ ಜಪ್ತಪಡಿಸಿಕೊಳ್ಳಲಾಯಿತು ನಂತರ ಮೇಲ್ಕಂಡ ಆರೋಪಿಯನ್ನು 7 ಪಿಎಮ್ಕ್ಕೆ ಠಾಣೆಗೆ ಕರೆದುಕೊಂಡು ಬಂದು ಸದರಿ ಆರೋಪಿತನ ವಿರುದ್ದ ಕಲಂ: 15(ಎ), 32(3) ಕೆಇ ಆಕ್ಟ ರೀತ್ಯಾ ಕ್ರಮ ಜರುಗಿಸಬೇಕು ಅಂತ ಕೊಟ್ಟ ವರದಿ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ:125/2021 ಕಲಂ: 15(ಎ), 32(3) ಕೆಇ ಆಕ್ಟ ನೇದ್ದರ ಪ್ರಕಾರ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

 


ಕೆಂಭಾವಿ ಪೊಲೀಸ ಠಾಣೆ
ಗುನ್ನೆ ನಂ, 126/2021 ಕಲಂ: 87 ಕೆಪಿ ಆಕ್ಟ : ಇಂದು ದಿನಾಂಕ: 31.08.2021ರಂದು ಕೆಂಭಾವಿ ಪಟ್ಟಣದ ಮಾಶಾಭಿ ದಗರ್ಾದ ಪಕ್ಕದ ಬಯಲು ಜಾಗೆಯಲ್ಲಿ ಕೆಲವು ಜನರು ಕುಳಿತು ಇಸ್ಪೇಟ ಜೂಜಾಟ ಆಡುತ್ತಿದ್ದಾರೆ ಅಂತ ಬಾತ್ಮಿ ಬಂದ ಮೇರೆಗೆ ಸಿಬ್ಬಂದಿ ಹಾಗೂ ಪಂಚರೊಂದಿಗೆ ಸರಕಾರಿ ಜೀಪ್ ನಂ ಕೆಎ 33 ಜಿ 0228 ನೇದ್ದರಲ್ಲಿ ಸದರ ಸ್ಥಳಕ್ಕೆ ಹೋಗಿ ಮಾಸಾಬಿ ದಗರ್ಾದ ಪಕ್ಕದಲ್ಲಿ ಮರೆಯಾಗಿ ನಿಂತು ನೋಡಲು ಆರೋಪಿತರು ಜೂಜಾಟ ಆಡುವ ಬಗ್ಗೆ ಖಚಿತಪಡಿಸಿಕೊಂಡು 8.30 ಪಿಎಮ್ಕ್ಕೆ ದಾಳಿ ಮಾಡಿದ್ದು ದಾಳಿಯಲ್ಲಿ 1) ಸಂಜು ತಂದೆ ಶರಣಪ್ಪ ಹೊಸಮನಿ ವ||27ಜಾ: ಪ ಜಾತಿ ಉ:ಕೂಲಿ ಸಾ: ಮುದನೂರ 2) ಗುರು ತಂದೆ ಶಿಒವಪುತ್ರಪ್ಪ ಗಣಾಚಾರಿ ವ:46ಜಾ: ಲಿಂಗಾಯತ ಉ: ಒಕ್ಕಲುತನ ಸಾ: ಕೆಂಭಾವಿ 3) ಖಾದಿರಸಾಬ ತಂದೆ ಇಬ್ರಾಹೀಂ ಹಾದಿಮನಿ ವ:45 ಜಾ: ಮುಸ್ಲೀಂ ಉ:ಒಕ್ಕಲುತನ ಸಾ: ಕೆಂಭಾವಿ 4)ಬಾಹುಬಲಿ ತಂದೆ ನ್ಯಾಮಣ್ಣ ಅವನೂರ ವ:41 ಜಾ: ಜೈನ ಉ:ಒಕ್ಕಲುತನ ಸಾ: ಕೆಂಭಾವಿ 5)ಗಜಾನಂದ ತಂದೆ ಗಲಿಗೆಪ್ಪ ಉಟಗಿ ವ:47 ಜಾ: ಲಿಂಗಾಯತ ಉ|| ಒಕ್ಕಲುತನ ಸಾ: ಕೆಂಭಾವಿ 6) ವಿಶ್ವನಾಥ ತಂದೆ ಸೋಮಶೇಖರ ವ:45 ಜಾ: ಲಿಂಗಾಯತ ಉ:ಒಕ್ಕಲುತನ ಸಾ: ಕೆಂಭಾವಿ ಹೀಗೆ ಒಟ್ಟು 06 ಜನ ಆರೋಪಿತರಿದ್ದು. ಮತ್ತು ಒಟ್ಟು 6350/- ರೂ ನಗದು ಹಣ ಮತ್ತು 52 ಇಸ್ಪೇಟ ಎಲೆಗಳು & 1 ಬರಕಾ ಸಿಕ್ಕಿದ್ದು ಸದರಿಯವುಗಳನ್ನು ಪಂಚರ ಸಮಕ್ಷಮ ವಶಪಡಿಸಿಕೊಂಡು ಠಾಣೆಗೆ 10 ಪಿ.ಎಮ್ ಕ್ಕೆ ಬಂದು ಮುಂದಿನ ಕ್ರಮ ಜರುಗಿಸಲು ಆದೇಶಿಸಿದ್ದು ಸದರಿ ವರದಿಯ ಸಾರಾಂಶದ ಮೇಲಿಂದ ಮಾನ್ಯ ನ್ಯಾಯಾಲಯದಿಂದ ಪರವಾನಿಗೆ ಪಡೆದು 08.15 ಗಂಟೆಗೆ ಸದರಿ ವರದಿ ಆಧಾರದ ಮೇಲಿಂದ ಕೆಂಭಾವಿ ಠಾಣೆ ಗುನ್ನೆ ನಂ 126/2021 ಕಲಂ 87 ಕೆಪಿ ಯಾಕ್ಟ ನೇದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

 

ಇತ್ತೀಚಿನ ನವೀಕರಣ​ : 02-09-2021 03:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080