Feedback / Suggestions

ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 09-07-2021

ಭೀಗುಡಿ ಪೊಲೀಸ್ ಠಾಣೆ
ಗುನ್ನೆ ನಂ : 48/2021 ಕಲಂ 78(3) ಕೆಪಿ ಯ್ಯಾಕ್ಟ : ಇಂದು ದಿನಾಂಕ 08/07/2021 ರಂದು 05.00 ಪಿ.ಎಮ್.ಕ್ಕೆಮದ್ರಕಿಗ್ರಾಮದ ಗೂಳಿಬಸವೇಶ್ವರದೇವರಗುಡಿ ಹತ್ತಿರಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತು ಹೋಗಿ ಬರುವ ಸಾರ್ವಜನಿಕರಿಂದ ಮಟಕಾ ನಂಬರ ಬರೆದುಕೊಳ್ಳುತ್ತಿರುವ ಬಗ್ಗೆ ಬಾತ್ಮಿ ಬಂದಿದ್ದು ಪ್ರಕರಣ ದಾಖಲಿಸಿಕೊಂಡು ದಾಳಿ ಕೈಕೊಳ್ಳಲು ಮಾನ್ಯ ನ್ಯಾಯಾಲಯದಿಂದ ಪರವಾನಿಗೆ ಪಡೆದುಕೊಂಡು 6.30 ಪಿ.ಎಮ್ ಕ್ಕೆ ಪ್ರಕರಣ ದಾಖಲಿಸಿ ನಂತರ ಪಿ.ಎಸ್.ಐರವರು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 7.30 ಪಿ.ಎಮ್.ಕ್ಕೆ ದಾಳಿ ಮಾಡಿಆರೋಪಿತನಿಂದ 1) ನಗದು ಹಣರೂಪಾಯಿ 1120=00, 2) ಮಟಕಾ ನಂಬರ ಬರೆದಒಂದುಚೀಟಿ 3) ಒಂದು ಬಾಲ್ ಪೆನ್ ನೇದ್ದವುಗಳನ್ನು ಪಂಚನಾಮೆ ಮೂಲಕ ವಶಪಡಿಸಿಕೊಂಡು ಆರೋಪಿತನ ವಿರುದ್ದಕ್ರಮ ಜರುಗಿಸಿದ ಬಗ್ಗೆ.

 

ಗುರಮಿಠಕಲ್ ಪೊಲೀಸ್ ಠಾಣೆ
ಗುನ್ನೆ ನಂ: 102/2021 ಕಲಂ: 78() ಕೆ.ಪಿ. ಆಕ್ಟ್ : ಇಂದು ದಿನಾಂಕ 12.06.2021 ರಂದು ಸಂಜೆ 5:00 ಗಂಟೆಗೆ ಕಂದಕೂರ ಗೇಟ್ನಲ್ಲಿ ರೋಡಿನ ಮೇಲೆ ಒಬ್ಬ ವ್ಯಕ್ತಿ ಮಟಕಾ ಅಂಕಿ-ಸಂಖ್ಯೆ ಬರೆದುಕೊಳ್ಳುತ್ತಿದ್ದಾನೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿ. ಐ ರವರು ಠಾಣೆ ಎನ್.ಸಿ. ನಂಬರ 16/2021 ಅಡಿಯಲ್ಲಿ ಕ್ರಮ ಕೈಕೊಂಡು ನಂತರ ಪಿ.ಐ ರವರು ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯ ಯಾದಗಿರಿ ರವರಲ್ಲಿ ಸದರಿ ಸ್ಥಳಕ್ಕೆ ಹೋಗಿ ದಾಳಿ ಮಾಡಿ ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಕೊಳ್ಳಲು ಅನುಮತಿ ನೀಡುವಂತೆ ಪತ್ರದ ಮುಖಾಂತರ ಕೋರಿಕೊಂಡಿರುತ್ತಾರೆ. ನಂತರ ಹೆಚ್.ಸಿ-214 ರವರು ಮಾನ್ಯ ನ್ಯಾಯಾಲಯದಿಂದ ವಸೂಲಾದ ಅನುಮತಿ ಪತ್ರವನ್ನು ಸಂಜೆ 7:30 ಗಂಟೆಗೆ ತಂದು ಪಿ.ಐ ರವರ ಮುಂದೆ ಹಾಜರುಪಡಿಸಿದ್ದು ಆ ಮೇಲೆ ಪಿ.ಐ ರವರು ಪಂಚರನ್ನು ಮತ್ತು ಸಿಬ್ಬಂದಿಯವರನ್ನು ಕರೆದುಕೊಂಡು ಸ್ಥಳಕ್ಕೆ ಹೋಗಿ ಸಮಯ ರಾತ್ರಿ 8:15 ಗಂಟೆಗೆ ದಾಳಿ ಮಾಡಿ ಆರೋಪಿತನನ್ನು ಹಿಡಿದು ಅವರ ವಶದಲ್ಲಿದ್ದ ನಗದು ಹಣ, ಮಟಕಾ ಅಂಕಿ-ಸಂಖ್ಯೆ ಬರೆದ ಚೀಟಿ, ಒಂದು ಬಾಲ ಪೇನ್ ಸೇರಿ ಒಟ್ಟು 1540/- ರೂ ಬೆಲೆಯ ಮುದ್ದೆ ಮಾಲನ್ನು ಪಂಚರ ಸಮಕ್ಷಮ ಜಪ್ತಿಪಂಚನಾಮೆಯ ಮೂಲಕ ಜಪ್ತಿಪಡಿಕೊಂಡು ವಶಕ್ಕೆ ತೆಗೆದುಕೊಂಡು ಆರೋಪಿತನೊಂದಿಗೆ ಇಂದು ದಿನಾಂಕ 08.07.2021 ರಂದು ಸಮಯ ರಾತ್ರಿ 9:45 ಗಂಟೆಗೆ ಠಾಣೆಗೆ ಬಂದು ನನ್ನ ಮುಂದೆ ಹಾಜರುಪಡಿಸಿದ್ದು ಅದರ ಸಾರಾಂಶದ ಮೇಲಿಂದ ನಾನು ಗುರುಮಠಕಲ್ ಠಾಣೆ ಗುನ್ನೆ ನಂಬರ 102/2021 ಕಲಂ: 78() ಕೆಪಿ ಆಕ್ಟ್ ಅಡಿಯಲ್ಲಿ ಕ್ರಮ ಕೈಕೊಂಡೆನು.

Last Updated: 09-07-2021 01:13 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : YADGIRI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2021, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080