ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 12-01-2023ಕೆಂಭಾವಿ ಪೊಲೀಸ್ ಠಾಣೆ:-
ಗುನ್ನೆ ನಂ 02/2023 ಕಲಂ 87 ಕೆ.ಪಿ ಯಾಕ್ಟ್ : ಇಂದು ದಿನಾಂಕ 11/01/2023 ರಂದು 5.30 ಪಿಎಮ್ ಕ್ಕೆ ಶ್ರೀ ಹಣಮಂತ ಪಿ.ಎಸ್.ಐ(ಕಾ.ಸು) ಸಾಹೇಬರು ಠಾಣೆಗೆ ಬಂದು 10 ಜನ ಆರೋಪಿತರು, ಮುದ್ದೆಮಾಲು, ಜಪ್ತಿ ಪಂಚನಾಮೆ ಸಮೇತ ಒಂದು ವರದಿ ನೀಡಿ ಮುಂದಿನ ಕ್ರಮ ಜರುಗಿಸಲು ಸೂಚಿಸಿದ್ದು ಸದರಿ ವರದಿಯ ಸಾರಾಂಶವೇನೆಂದರೆ, ನಾನು ಹಣಮಂತ ಪಿ.ಎಸ್.ಐ(ಕಾ.ಸು) ಕೆಂಭಾವಿ ಪೊಲೀಸ್ ಠಾಣೆ ಇದ್ದು ವರದಿ ನೀಡುವುದೇನೆಂದರೆ, ಇಂದು ದಿನಾಂಕ 11/01/2023 ರಂದು 3.30 ಪಿಎಂ ಕ್ಕೆ ನಾನು ಠಾಣೆಯಲ್ಲಿದ್ದಾಗ ಠಾಣಾ ವ್ಯಾಪ್ತಿಯ ಕೆಂಭಾವಿ ಪಟ್ಟಣದ ಹೊರವಲಯದಲ್ಲಿನ ಪಾಟೀಲ್ ಪೆಟ್ರೋಲ್ ಬಂಕ್ ಹಿಂದಿನ ಬಯಲು ಜಾಗೆಯಲ್ಲಿ ಕೆಲವು ಜನರು ದುಂಡಾಗಿ ಕುಳಿತು ಹಣ ಪಣಕ್ಕಿಟ್ಟು, ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್ ಬಾಹರ್ ಎನ್ನುವ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತವಾದ ಬಾತ್ಮೀ ಬಂದ ಮೇರೆಗೆ ನಾನು ಮತ್ತು ಠಾಣೆಯ ಬಲರಾಮ ಎ.ಎಸ್.ಐ, ಶಿವರಾಜ ಹೆಚ್.ಸಿ 85, ಪ್ರಕಾಶ ಹೆಚ್.ಸಿ 122, ಪ್ರಭುಗೌಡ ಪಿಸಿ 361, ಶಿವಪ್ಪ ಪಿಸಿ 326, ಬಸವರಾಜ ಪಿಸಿ 363, ಮಾಳಪ್ಪ ಪಿಸಿ 29, ವೀರೇಶ ಪಿಸಿ 401, ವಿಜಯಾನಂದ ಪಿಸಿ 103 ಮತ್ತು ಕಾಶಿನಾಥ ಪಿಸಿ 293 ರವರನ್ನು ಹಾಗೂ ಇಬ್ಬರು ಪಂಚರಾದ ಮಡಿವಾಳಪ್ಪ ತಂದೆ ಕೆಂಚಪ್ಪ ದೊಡ್ಡಮನಿ ಮತ್ತು ಮಕ್ತುಮಸಾಬ ತಂದೆ ಮಾಸುಮಸಾಬ ವಡಕೇರಿ ಇವರನ್ನು ಕರೆದುಕೊಂಡು ಠಾಣೆಯ ಜೀಪ ನಂ ಕೆಎ 33 ಜಿ 0228 ನೇದ್ದರಲ್ಲಿ ಠಾಣೆಯಿಂದ 3.40 ಪಿಎಂ ಕ್ಕೆ ಹೊರಟು 3.55 ಪಿಎಂ ಕ್ಕೆ ಕೆಂಭಾವಿ ಪಟ್ಟಣದ ಹೊರವಲಯದಲ್ಲಿನ ಪಾಟೀಲ್ ಪೆಟ್ರೋಲ್ ಬಂಕ್ ಹತ್ತಿರ ಹೋಗಿ ಸ್ವಲ್ಪ ದೂರದಲ್ಲಿ ಜೀಪ ನಿಲ್ಲಿಸಿ ಎಲ್ಲರೂ ಜೀಪಿನಿಂದ ಕೆಳಗೆ ಇಳಿದು ಮರೆಯಾಗಿ ನಿಂತು ನೋಡಲಾಗಿ ಅಲ್ಲಿ ಕೆಲವು ಜನರು ಇಸ್ಪೀಟ್ ಎಲೆಗಳ ಸಹಾಯದಿಂದ ಹಣ ಪಣಕ್ಕಿಟ್ಟು ಅಂದರ್ ಬಾಹರ್ ಎನ್ನುವ ಇಸ್ಪೀಟ ಜೂಜಾಟ ಆಡುತ್ತಿರುವುದನ್ನು ನೋಡಿ ಖಚಿತಪಡಿಸಿಕೊಂಡು 4.00 ಪಿಎಂ ಕ್ಕೆ ನಾನು ಮತ್ತು ಸಿಬ್ಬಂದಿ ಜನರು ಕೂಡಿ ಒಮ್ಮೆಲೇ ದಾಳಿ ಮಾಡಿದ್ದು ದಾಳಿಯಲ್ಲಿ 10 ಜನರು ಸಿಕ್ಕಿದ್ದು ಸಿಕ್ಕವರ  ಹೆಸರು ವಿಳಾಸ ವಿಚಾರಿಸಲಾಗಿ 1) ಜಮೀಲ್ ತಂದೆ ಹುಸೇನಭಾಷಾ ಹುಳಬುತ್ತಿ ವ|| 40 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಈತನ ಹತ್ತಿರ 600/- ರೂ 2) ಲಕ್ಷ್ಮಣ ತಂದೆ ಹಣಮಂತ ಭೋವಿ ವ|| 35 ಜಾ|| ವಡ್ಡರ ಉ|| ಕೂಲಿ ಸಾ|| ಕೆಂಭಾವಿ ಈತನ ಹತ್ತಿರ 600/- ರೂ 3) ಜೈಭೀಮ ತಂದೆ ನಿಂಗಪ್ಪ ಕಟ್ಟಿಮನಿ ವ|| 24 ಜಾ|| ಹಿಂದೂ ಹೊಲೆಯ ಉ|| ಚಾಲಕ ಸಾ|| ಕೆಂಭಾವಿ ಈತನ ಹತ್ತಿರ 400/- ರೂ 4) ಮುಜಾಹಿದ ಹುಸೇನ್ ತಂದೆ ರಫೀಕಹುಸೇನ್ ಖಾಜಿ ವ|| 28 ಜಾ|| ಮುಸ್ಲಿಂ ಉ|| ಒಕ್ಕಲುತನ ಸಾ|| ಕೆಂಭಾವಿ ಈತನ ಹತ್ತಿರ 800/- ರೂ 5) ನೂರಅಲಿ ತಂದೆ ಮಹ್ಮದ ಜಾಫರ ವಡಕೇರಿ ವ|| 36 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಈತನ ಹತ್ತಿರ 700/- ರೂ 6) ಸದರ್ಾರಸಾಬ ತಂದೆ ಭಾಷುಮಿಯಾ ವಡಕೇರಿ ವ|| 53 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಈತನ ಹತ್ತಿರ 800/- ರೂ 7) ನಿಂಗಣ್ಣ ತಂದೆ ಸಿದ್ದಣ್ಣ ತಳವಾರ ವ|| 22 ಜಾ|| ಕಬ್ಬಲಿಗ ಉ|| ಒಕ್ಕಲುತನ ಸಾ|| ಕೆಂಭಾವಿ ಈತನ ಹತ್ತಿರ 500/- ರೂ 8) ರಮೇಶ ತಂದೆ ಸಾಯಬಣ್ಣ ಹೆಳವರ ವ|| 25 ಜಾ|| ಹೆಳವರ ಉ|| ಕೂಲಿ ಸಾ|| ಕೆಂಭಾವಿ ಈತನ ಹತ್ತಿರ 600/- ರೂ 9) ಮಹ್ಮದ ಇಸ್ಮಾಯಿಲ್ ತಂದೆ ಅಬ್ದುಲಸಾಬ ಸಾಸನೂರ ವ|| 40 ಜಾ|| ಮುಸ್ಲಿಂ ಉ|| ವ್ಯಾಪಾರ ಸಾ|| ಕೆಂಭಾವಿ ಈತನ ಹತ್ತಿರ 1100/- ರೂ 10) ತಿರುಪತಿ ತಂದೆ ಕಾಮಣ್ಣ ಚಿಗರಿಹಾಳ ವ|| 37 ಜಾ|| ಬೇಡರ ಉ|| ಒಕ್ಕಲುತನ ಸಾ|| ಕೆಂಭಾವಿ ಈತನ ಹತ್ತಿರ 500/- ರೂ ಅಂತ ಇದ್ದು, ಎಲ್ಲರ ಮಧ್ಯ ಕಣದಲ್ಲಿ 600/- ರೂ ಹಣ ಸಿಕ್ಕಿದ್ದು ಹೀಗೆ ಒಟ್ಟು 7200/- ರೂ ನಗದು ಹಣ ಮತ್ತು 52 ಇಸ್ಪೀಟ್ ಎಲೆಗಳು ಸಿಕ್ಕಿದ್ದು ಸದರಿ ದಾಳಿಯಲ್ಲಿ ಸಿಕ್ಕ ಹಣ, ಇಸ್ಪೀಟ ಎಲೆಗಳನ್ನು ಪಂಚರ ಸಮಕ್ಷಮದಲ್ಲಿ ವಶಪಡಿಸಿಕೊಂಡಿದ್ದು ಇರುತ್ತದೆ. ಸದರಿ ಜಪ್ತಿ ಪಂಚನಾಮೆಯನ್ನು 4.00 ಪಿಎಂ ದಿಂದ 5.00 ಪಿಎಂ ದವರೆಗೆ ಮಾಡಿಕೊಂಡು ಸದರಿ ಆರೋಪಿತರು ಮತ್ತು ಮುದ್ದೆಮಾಲು ಹಾಗು ಜಪ್ತಿ ಪಂಚನಾಮೆಯ ಸಮೇತ ಮರಳಿ ಠಾಣೆಗೆ 5.30 ಪಿಎಮ್ ಕ್ಕೆ ಬಂದು ಈ ವರದಿಯನ್ನು ನೀಡಿ ಮುಂದಿನ ಕ್ರಮ ಜರುಗಿಸಬೇಕು ಅಂತ ನೀಡಿದ ವರದಿಯ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂ 02/2023 ಕಲಂ 87 ಕೆಪಿ ಯಾಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

ಗೋಗಿ ಪೊಲೀಸ್ ಠಾಣೆ:-
ಗುನ್ನೆ ನಂ: 06/2023 ಕಲಂ 78(3) ಕೆ.ಪಿ.ಆ್ಯಕ್ಟ್ : ಇಂದು ದಿನಾಂಕ: 11/01/2023 ರಂದು 04.25 ಪಿ.ಎಮ್ ಕ್ಕೆ ದರ್ಶನಾಪೂರ ಗ್ರಾಮದ ಹನುಮಾನ ದೇವರ ಗುಡಿಯ ಮುಂದೆ ರೋಡಿನ ಮೇಲೆೆ ಒಬ್ಬ ವ್ಯಕ್ತಿಯು ಮಟಕಾ ಜೂಜಾಟದ ನಂಬರ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದಿದ್ದರಿಂದ ಮಾನ್ಯ ಸಿಪಿಐ ಸಾಹೇಬರು ಶಹಾಪೂರ ರವರ ಮಾರ್ಗದರ್ಶನದಲ್ಲಿ, ಶ್ರೀ. ಅಯ್ಯಪ್ಪ ಪಿ.ಎಸ್.ಐ (ಕಾ&ಸು) ರವರು ಪಂಚರ ಸಮಕ್ಷಮದಲ್ಲಿ ಸಿಬ್ಬಂದಿಯವರ ಸಹಾಯದಿಂದ 05.10 ಪಿಎಮ್ ಕ್ಕೆ ದಾಳಿ ಮಾಡಿ ಮಟಕಾ ನಂಬರ ಬರೆದುಕೊಳ್ಳುತ್ತಿದ್ದ ಚಂದ್ರಕಾಂತ ತಂದೆ ಬಸವರಾಜ ರಾಜಾಪೂರ ವಯಾ:35 ಉ: ಡ್ರೈವರ ಜಾ: ಕಬ್ಬಲಿಗ ಸಾ: ದರ್ಶನಾಪೂರ ತಾ: ಶಹಾಪೂರ ಜಿ: ಯಾದಗಿರಿ ಈತನಿಗೆ ಹಿಡಿದು ಸದರಿಯವನಿಂದ ನಗದು ಹಣ 1350/- ರೂ. ಹಾಗೂ ಒಂದು ಮಟಕಾ ಚೀಟಿ ಮತ್ತು ಒಂದು ಬಾಲ್ ಪೆನ್ನನ್ನು ಪಂಚರ ಸಮಕ್ಷಮ 05.05 ಪಿಎಮ್ ದಿಂದ 06.05 ಪಿ.ಎಮ್ ವರೆಗೆ ಪಂಚನಾಮೆ ಮೂಲಕ ಜಪ್ತಿಪಡಿಸಿಕೊಂಡಿದ್ದು ಇರುತ್ತದೆ. ಸದರಿಯವನ ವಿರುದ್ದ ಕಲಂ, 78(3) ಕೆ.ಪಿ.ಆಕ್ಟ್ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಿದ ವರದಿಯ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ: 06/2023 ಕಲಂ, 78 (3) ಕೆ.ಪಿ. ಆಕ್ಟ್ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.


ಗೋಗಿ ಪೊಲೀಸ್ ಠಾಣೆ:-
ಗುನ್ನೆ ನಂ: 07/2023 ಕಲಂ 78(3) ಕೆ.ಪಿ.ಆ್ಯಕ್ಟ್ : ಇಂದು ದಿನಾಂಕ: 11/01/2023 ರಂದು 07.25 ಪಿ.ಎಮ್ ಕ್ಕೆ ರಾಜಪೂರ ಗ್ರಾಮದ ಅಗಸಿಯ ಹತ್ತಿರ ರೋಡಿನ ಮೇಲೆೆ ಒಬ್ಬ ವ್ಯಕ್ತಿಯು ಮಟಕಾ ಜೂಜಾಟದ ನಂಬರ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದಿದ್ದರಿಂದ ಮಾನ್ಯ ಸಿಪಿಐ ಸಾಹೇಬರು ಶಹಾಪೂರ ರವರ ಮಾರ್ಗದರ್ಶನದಲ್ಲಿ, ಶ್ರೀ. ಅಯ್ಯಪ್ಪ ಪಿ.ಎಸ್.ಐ (ಕಾ&ಸು) ರವರು ಪಂಚರ ಸಮಕ್ಷಮದಲ್ಲಿ ಸಿಬ್ಬಂದಿಯವರ ಸಹಾಯದಿಂದ 08.10 ಪಿಎಮ್ ಕ್ಕೆ ದಾಳಿ ಮಾಡಿ ಮಟಕಾ ನಂಬರ ಬರೆದುಕೊಳ್ಳುತ್ತಿದ್ದ ಕಾಳಪ್ಪ ತಂದೆ ಗಂಗಪ್ಪ ಹುಲಕಲ್ ವಯಾ:74 ವರ್ಷ ಉ: ಒಕ್ಕಲುತನ ಜಾ: ಕುರುಬರ ಸಾ: ರಾಜಾಪೂರ ತಾ: ಶಹಾಪೂರ ಜಿ: ಯಾದಗಿರಿ ಈತನಿಗೆ ಹಿಡಿದು ಸದರಿಯವನಿಂದ ನಗದು ಹಣ 1710/- ರೂ. ಹಾಗೂ ಒಂದು ಮಟಕಾ ಚೀಟಿ ಮತ್ತು ಒಂದು ಬಾಲ್ ಪೆನ್ನನ್ನು ಪಂಚರ ಸಮಕ್ಷಮ 08.10 ಪಿಎಮ್ ದಿಂದ 09.10 ಪಿ.ಎಮ್ ವರೆಗೆ ಪಂಚನಾಮೆ ಮೂಲಕ ಜಪ್ತಿಪಡಿಸಿಕೊಂಡಿದ್ದು ಇರುತ್ತದೆ. ಸದರಿಯವನ ವಿರುದ್ದ ಕಲಂ, 78(3) ಕೆ.ಪಿ.ಆಕ್ಟ್ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಿದ ವರದಿಯ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ: 07/2023 ಕಲಂ, 78 (3) ಕೆ.ಪಿ. ಆಕ್ಟ್ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

ಶಹಾಪೂರ ಪೊಲೀಸ್ ಠಾಣೆ:-
ಗುನ್ನೆ ನಂ: 10/2023 ಕಲಂ 78(3) ಕೆ.ಪಿ.ಆ್ಯಕ್ಟ್ ಇಂದು ದಿನಾಂಕ. 11/01/2023 ರಂದು ಸಾಯಂಕಾಲದ ಸುಮಾರಿಗೆ ಆರೋಪಿತನು ದೋರನಹಳ್ಳಿ ಗ್ರಾಮದ ಸಿದ್ದಾರೂಢ ಮಠದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ದೈವಿ ಜೂಜಾಟವಾದ ಮಟಕಾ ನಂಬರ ಬರೆದುಕೊಳ್ಳುತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಸರಕಾರಿ ತಫರ್ೇ ಫಿಯರ್ಾದಿಯವರು ತಮ್ಮ ಜೊತೆಯಲ್ಲಿ ಠಾಣೆಯ ಸಿಬ್ಬಂದಿ ಹಾಗೂ ಪಂಚರೊಂದಿಗೆ ಠಾಣೆಯ ಸರಕಾರಿ ವಾಹನದಲ್ಲಿ ಹೋಗಿ ದಾಳಿ ಮಾಡಿ ಆರೋಪಿತನನ್ನು ಹಿಡಿದು ಆತನ ವಶದಲ್ಲಿದ್ದ ನಗದು ಹಣ 1820 ರೂ ಮತ್ತು ಮಟಕಾ ಚೀಟಿ ಮತ್ತು ಮಟಕಾ ನಂಬರ ಬರೆಯಲು ಉಪಯೋಗಿಸಿದ ಬಾಲ್ ಪೆನ್ ಪಂಚರ ಸಮಕ್ಷಮದಲ್ಲಿ ಸಾಯಂಕಾಲ 19-45 ಗಂಟೆಯಿಂದ ರಾತ್ರಿ 20-45 ಗಂಟೆಯವರೆಗೆ ಜಪ್ತಿ ಪಡಿಸಿಕೊಂಡು ವರದಿ ಸಲ್ಲಿಸಿದ್ದರ ಸಾರಾಂಶದ ಮೇಲಿಂದ ಆರೋಪಿತನ ವಿರುದ್ಧ ಕ್ರಮ ಕೈಗೊಂಡಿರುತ್ತದೆ.
 

ಇತ್ತೀಚಿನ ನವೀಕರಣ​ : 12-01-2023 10:20 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080