ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 18-08-2022


ಕೆಂಭಾವಿ ಪೊಲೀಸ್ ಠಾಣೆ:-
ಗುನ್ನೆ ನಂ: 130/2022 ಕಲಂ: 78(3) ಕೆಪಿ ಯಾಕ್ಟ: ಇಂದು ದಿನಾಂಕ 17.08.2022 ರಂದು 8.30 ಪಿಎಂ ಕ್ಕೆ ಶ್ರೀ ಹಣಮಂತ ಪಿ.ಎಸ್.ಐ(ಕಾ.ಸು) ಸಾಹೇಬರು ಕೆಂಭಾವಿ ಠಾಣೆ ರವರು ಠಾಣೆಗೆ ಹಾಜರಾಗಿ ಒಬ್ಬ ಆರೋಪಿ, ಜಪ್ತಿ ಪಂಚನಾಮೆ, ಮುದ್ದೆಮಾಲು ಸಮೇತ ಒಂದು ವರದಿಯನ್ನು ನೀಡಿ ಮುಂದಿನ ಕ್ರಮ ಜರುಗಿಸುವಂತೆ ಸೂಚಿಸಿದ್ದ್ದು ಸದರಿ ವರದಿಯ ಸಾರಾಂಶವೇನೆಂದರೆ, ನಾನು ಹಣಮಂತ ಪಿ.ಎಸ್.ಐ(ಕಾ.ಸು) ಕೆಂಭಾವಿ ಪೊಲೀಸ್ ಠಾಣೆ ಇದ್ದು ವರದಿ ನೀಡುವುದೇನೆಂದರೆ, ನಾನು ಇಂದು ದಿನಾಂಕ 17.08.2022 ರಂದು 6.30 ಪಿಎಂ ಕ್ಕೆ ಠಾಣೆಯಲ್ಲಿದ್ದಾಗ ಕಿರದಳ್ಳಿ ಗ್ರಾಮದ ಹನುಮಾನ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತು ಸಾರ್ವಜನಿಕರಿಗೆ ಕರೆಯುತ್ತ ಬರ್ರಿ ಬರ್ರಿ ಬಾಂಬೆ ಮಟಕಾ ಇದೆ ಕಲ್ಯಾಣ ಮಟಕಾ ಇದೆ ಒಂದು ರೂಪಾಯಿಗೆ ಎಂಬತ್ತು ರೂಪಾಯಿ ಬರುತ್ತದೆ ಬಂದು ನಿಮ್ಮ ಅದೃಷ್ಟದ ನಂಬರ ಬರೆಯಿಸಿರಿ ಅಂತಾ ಕರೆದು ಸಾರ್ವಜನಿಕರಿಂದ ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದಾನೆ ಅಂತಾ ಖಚಿತವಾದ ಬಾತ್ಮೀ ಬಂದ ಮೇರೆಗೆ ನಾನು, ನಮ್ಮ ಠಾಣೆಯ ಆನಂದ ಪಿಸಿ 43 ಮತ್ತು ಕಾಶಿನಾಥ ಪಿಸಿ 293 ರವರನ್ನು ಹಾಗೂ ಇಬ್ಬರು ಪಂಚರಾದ ಮಡಿವಾಳಪ್ಪ ತಂದೆ ಕೆಂಚಪ್ಪ ದೊಡ್ಡಮನಿ ಹಾಗೂ ಮುಕ್ತುಂಸಾಬ ತಂದೆ ಮಾಸುಮಸಾಬ ವಡಕೇರಿ ಇವರನ್ನು ಕರೆದುಕೊಂಡು ಠಾಣೆಯ ಜೀಪ ನಂ ಕೆಎ 33 ಜಿ 0228 ನೇದ್ದರಲ್ಲಿ ಠಾಣೆಯಿಂದ 6.40 ಪಿಎಂ ಕ್ಕೆ ಹೊರಟು ಕಿರದಳ್ಳಿ ಗ್ರಾಮದ ಹನುಮಾನ ದೇವಸ್ಥಾನದ ಹತ್ತಿರ 6.55 ಪಿಎಂ ಕ್ಕೆ ಹೋಗಿ ಎಲ್ಲರೂ ಜೀಪಿನಿಂದ ಇಳಿದು ಮರೆಯಾಗಿ ನಿಂತು ನೋಡಲಾಗಿ ಅಲ್ಲಿ ಒಬ್ಬ ವ್ಯಕ್ತಿ ಬರ್ರಿ ಬರ್ರಿ ಇದು ಬಾಂಬೆ ಮಟಕಾ ಇದೆ, ಕಲ್ಯಾಣ ಮಟಕಾ ಇದೆ 1 ರೂಪಾಯಿಗೆ 80 ರೂಪಾಯಿ ಬರುತ್ತದೆ ಬಂದು ನಿಮ್ಮ ದೈವದ ನಂಬರ ಬರೆಯಿಸಿರಿ ಅಂತಾ ಸಾರ್ವಜನಿಕರಿಗೆ ಕರೆದು ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದುದನ್ನು ನೋಡಿ ಖಚಿತಪಡಿಸಿಕೊಂಡು 7.00 ಪಿಎಂ ಕ್ಕೆ ಸಿಬ್ಬಂದಿ ಮತ್ತು ನಾನು ಒಮ್ಮೆಲೇ ದಾಳಿ ಮಾಡಿದ್ದು ಮಟಕಾ ನಂಬರ ಬರೆಯುತ್ತಿದ್ದ ವ್ಯಕ್ತಿ ಸಿಕ್ಕಿದ್ದು ನಂಬರ ಬರೆಸಲು ಬಂದ ಜನರು ಓಡಿ ಹೋಗಿದ್ದು ದಾಳಿಯಲ್ಲಿ ಸಿಕ್ಕ ವ್ಯಕ್ತಿಯ ಹೆಸರು ವಿಳಾಸ ವಿಚಾರಿಸಲಾಗಿ ತನ್ನ ಹೆಸರು ಮೈನುದ್ದೀನ್ ತಂದೆ ಅಲ್ಲಿಸಾಬ ಶಾನಿ ವ|| 34 ಜಾ|| ಮುಸ್ಲಿಂ ಉ|| ಕೂಲಿ ಮತ್ತು ಮಟಕಾ ನಂಬರ ಬರೆದುಕೊಳ್ಳುವುದು ಸಾ|| ಪರಸನಳ್ಳಿ ಹಾ|| ವ|| ಕಿರದಳ್ಳಿ ತಾ|| ಸುರಪೂರ ಅಂತಾ ತಿಳಿಸಿದ್ದು ಸದರಿ ವ್ಯಕ್ತಿಯ ಅಂಗಶೋಧನೆ ಮಾಡಲಾಗಿ ಅವನ ಹತ್ತಿರ ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ನು ಮತ್ತು ನಗದು ಹಣ 1120/- ರೂಪಾಯಿ ಸಿಕ್ಕಿದ್ದು ಸದರಿ ವ್ಯಕ್ತಿಗೆ ಸಾರ್ವಜನಿಕರಿಂದ ದೈವಲೀಲೆಯ ಮಟಕಾ ನಂಬರ ಬರೆಯಿಸಲು ಪಡೆದ ಹಣ ಮತ್ತು ಮಟಕಾ ನಂಬರ ಯಾರಿಗೆ ಕೊಡುತ್ತಿಯಾ ಅಂತಾ ವಿಚಾರಿಸಿದಾಗ ಕಿರದಳ್ಳಿ ಗ್ರಾಮದ ರಮೇಶ ತಂದೆ ಗಂಗಾಧರ ವಿಶ್ವಕರ್ಮ ಇವರಿಗೆ ಕೊಡುತ್ತಿದ್ದೇನೆ ಅಂತಾ ತಿಳಿಸಿದ್ದರಿಂದ ಸದರಿ ರಮೇಶ ವಿಶ್ವಕರ್ಮ ಈತನಿಗೆ ಹುಡುಕಾಡಲಾಗಿ ಊರಲ್ಲಿ ಇರದೇ ಪರಾರಿಯಾಗಿರುತ್ತಾನೆ ಅಂತಾ ಮಾಹಿತಿ ಬಂದಿದ್ದು ದಾಳಿಯಲ್ಲಿ ಸಿಕ್ಕಿರುವ ಮೈನುದ್ದೀನ್ ಶಾನಿ ಈತನಿಗೆ ವಶಕ್ಕೆ ಪಡೆದು ಅವನ ಹತ್ತಿರ ಸಿಕ್ಕ ಮಟಕಾ ನಂಬ ಚೀಟಿ, ಪೆನ್ನು ಮತ್ತು ನಗದು ಹಣವನ್ನು ಪಂಚರ ಸಮಕ್ಷಮದಲ್ಲಿ ಜಪ್ತಿ ಪಂಚನಾಮೆಯನ್ನು 7.00 ಪಿಎಂ ದಿಂದ 8.00 ಪಿಎಂ ದವರೆಗೆ ಮಾಡಿಕೊಂಡು ಸದರಿ ಆರೋಪಿ ಮತ್ತು ಮುದ್ದೆಮಾಲು ಹಾಗು ಜಪ್ತಿ ಪಂಚನಾಮೆಯ ಸಮೇತ ಈ ವರದಿಯನ್ನು ನೀಡಿದ್ದು ಮುಂದಿನ ಕ್ರಮ ಜರುಗಿಸಬೇಕೆಂದು ನೀಡಿದ ವರದಿಯ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂಬರ 130/2022 ಕಲಂ 78(3) ಕೆಪಿ ಯಾಕ್ಟ್ ನೇದ್ದರ ಪ್ರಕಾರ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.


ಗುರುಮಠಕಲ್ ಪೊಲೀಸ್ ಠಾಣೆ:-
ಗುನ್ನೆ ನಂ: 132/2022 ಕಲಂ: 457, 380 ಐಪಿಸಿ:ದಿನಾಂಕಃ 16.08.2022 ರಂದು ರಾತ್ರಿ 10:30 ಗಂಟೆಯಿಂದ ದಿನಾಂಕಃ 17.08.2022 ರಂದು ಬೆಳಗಿನ ಜಾವಾ 05:00 ಗಂಟೆಯ ಮದ್ಯದ ಅವಧಿಯಲಿ ಯಾರೋ ಕಳ್ಳರು ಈ ಕೇಸಿನ ಫಿಯರ್ಾದಿಯ ತಮ್ಮಂದಿರರಾದ ಗೋವಿಂದ ಮತ್ತು ಗೋಪಾಲ ಇವರ ಮನೆಯ ಕೀಲಿಗಳನ್ನು ಮುರಿದು ಗೋಪಾಲ ಇತನ ಮನೆಯ ಅಲಮಾರಿಯಲ್ಲಿಟ್ಟಿದ್ದ ಒಂದು ತೊಲೆಯ ಬಂಗಾರದ ನಾನ (ಸರ), ಅರ್ಧ ತೊಲೆಯ ಬಂಗಾರದ ಕಿವಿಯೋಲೆ ಹೀಗೆ ಒಂದುವರೆ ತೊಲೆಯ ಬಂಗಾರದ ಆಭರಣಗಳು ಅ.ಕಿ.75,000/- ರೂ. ಹಾಗೂ ನಗದು ಹಣ 65,000/- ರೂ. ಹೀಗೆ ಒಟ್ಟು 1,40,000/- ರೂ ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಅಂತಾ ವಗೈರೆ ಫಿಯರ್ಾದಿ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ. 131/2022 ಕಲಂ. 457, 380 ಐಪಿಸಿ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 18-08-2022 10:23 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080