ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 22-11-2021

ಗುರಮಿಠಕಲ್ ಪೊಲೀಸ ಠಾಣೆ
ಗುನ್ನೆ ನಂ: 181/2021 ಕಲಂ 143 147, 323 354 504 506 ಸಂ 149 ಐ.ಪಿ.ಸಿ : ಪಿರ್ಯಾಧಿಗೆ ಪಿರ್ಯಾಧಿಯು ತಮ್ಮ ದೊಡ್ಡಿಯಲ್ಲಿ ದನಗಲಿಗೆ ಮೇವು ತರಲು ಹೋದಾಗ ಆರೋಪಿ 1 ನೇದ್ದವನು ಪಿರ್ಯಾಧಿಗೆ ಕೈಹಿಡಿದು ಜಗ್ಗಾಡಿ ಮಾನಭಂಗ ಪಡಿಸಲು ಪ್ರಯತ್ನಿಸಿದ್ದು ಈ ವಿಷಯವಾಗಿ ನ್ಯಾಯಾ ಪಂಚಾಯತಿ ಮಾಡವ ಸಲುವಾಗಿ ಪಿರ್ಯಾಧಿ ಗಂಡ ಮತ್ತು ಪಿರ್ಯಾಧಿಯು ಗ್ರಾಮದ ಹಳೆ ಶಾಲೆಯ ಹತ್ತಿರ ಇದ್ದಾಗ ಆರೋಪಿತರೆಲ್ಲರೂ ಗುಂಪು ಕಟ್ಟಿಕೊಂಡು ಬಂದು ಪಿರ್ಯಾಧಿಗೆ ಅವಾಚ್ಯ ಶಬ್ದಗಳಿಂದ ಬೈದು ಹೊಡೆ-ಬಡೆ ಮಾಡಿ ಜೀವ ಬೆದರಿಕೆ ಹಾಕಿ ಹೋದ ಬಗ್ಗೆ ಪಿರ್ಯಾಧಿ ವಗೈರೆ ಸಾರಾಂಶ ಇರುತ್ತದೆ.

 

ಗುರಮಿಠಕಲ್ ಪೊಲೀಸ್ ಠಾಣೆ
ಗುನ್ನೆ ನಂ. 182/2021 ಕಲಂ: 273, 284 ಐಪಿಸಿ ಮತ್ತು 32, 34 ಕೆಇ ಆಕ್ಟ್ : ಇಂದು ದಿನಾಂಕ: 21.11.2021 ರಂದು ಸಮಯ ಮಧ್ಯಾಹ್ನ 1:30 ಗಂಟೆಗೆ ಶ್ರೀಶೈಲ ಅಂಬಾಟಿ ಪಿ.ಎಸ್.ಐ ರವರು ಮತ್ತು ಸಿಬ್ಬಂದಿಯವರು ಠಾಣೆಯಲ್ಲಿದ್ದಾಗ ಆರೋಪಿತನು ಶಿವಪೂರ ಗ್ರಾಮದ ಬಸ್ ನಿಲ್ದಾಣದ ಮುಂದೆ ಖುಲ್ಲಾ ಸ್ಥಳದಲ್ಲಿ ಅಕ್ರಮವಾಗಿ ಕಳ್ಳ ಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ ರವರು ಪಂಚರನ್ನು ಮತ್ತು ಸಿಬ್ಬಂದಿಯವರನ್ನು ಕರೆದುಕೊಂಡು ಸ್ಥಳಕ್ಕೆ ಹೋಗಿ ಮಧ್ಯಾಹ್ನ 2:30 ಗಂಟೆಗೆ ದಾಳಿ ಮಾಡಿದಾಗ ಕುಡಿಯಲು ಮತ್ತು ಕೊಳ್ಳಲು ಬಂದಿದ್ದ ಸಾರ್ವಜನಿಕರು ಓಡಿ ಹೋಗಿದ್ದು ಮಾರಾಟ ಮಾಡುತ್ತಿದ್ದ ಆರೋಪಿತನನ್ನು ಮತ್ತು ಆತನ ವಶದಲ್ಲಿದ್ದ 04 ಕಳ್ಳಬಟ್ಟಿ ಸಾರಾಯಿಯನ್ನು ಹಾಗೂ ಕಳ್ಳಭಟ್ಟಿ ಸರಾಯಿಯ ಮಾರಾಟದಿಂದ ಬಂದ ನಗದು ಹಣ 110/- ರೂ ಸೇರಿ ಹೀಗೆ ಒಟ್ಟು 1310/- ರೂ ಬೆಲೆಯ ಮುದ್ದೆ ಮಾಲನ್ನು ಪಂಚರ ಸಮಕ್ಷಮ ಜಪ್ತಿ ಪಂಚನಾಮೆಯ ಮೂಲಕ ಜಪ್ತಿಪಡಿಸಿಕೊಂಡು ಮರಳಿ ಠಾಣೆಗೆ ಬಂದು ಆರೋಪಿತನ ವಿರುದ್ಧ ಕ್ರಮಕ್ಕಾಗಿ ವರದಿ ನೀಡಿದ್ದ ಅದರ ಸಾರಾಂಶದ ಮೇಲಿಂದ ಪ್ರಕರಣದ ದಾಖಲಿಸಿಕೊಂಡೆನು.

 

ಗೋಗಿ ಪೊಲೀಸ ಠಾಣೆ
ಗುನ್ನೆ ನಂ: 105/2021 ಕಲಂ 87 ಕೆಪಿ ಯ್ಯಾಕ್ಟ : ಇಂದು ದಿನಾಂಕ 21/11/2021 ರಂದು 04:00 ಪಿ.ಎಮ್.ಕ್ಕೆ ಫಿಯರ್ಾದಿದಾರರು ಠಾಣೆಯಲ್ಲಿದ್ದಾಗ ಗೋಗಿ ಕೆ ಸೀಮಾಂತರದ ಬೋರುಕಾ ಆಂದ್ರ ಕ್ಯಾಂಪ ಹತ್ತಿರ ಸಾರ್ವಜನಿಕ ಖುಲ್ಲಾ ಜಾಗದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಅಂತ ಇಸ್ಪೇಟ ಜೂಜಾಟ ಆಡುತ್ತಿದ್ದ ಬಗ್ಗೆ ಬಾತ್ಮಿ ಬಂದಿದ್ದರಿಂದ, 04.15 ಪಿ.ಎಮ್.ಕ್ಕೆ ಪ್ರಕರಣ ದಾಖಲಿಸಿ ಪಂಚರು ಮತ್ತು ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ಹೋಗಿ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮ 04.50 ಪಿ.ಎಮ್ ಕ್ಕೆ ದಾಳಿ ಮಾಡಿದ್ದು ದಾಳಿಯಲ್ಲಿ ಸಿಕ್ಕ 09 ಜನ ಆರೋಪಿತರಿಂದ ಹಾಗು ಕಣದಲ್ಲಿಂದ ನಗದು ಒಟ್ಟು ಹಣ 45210/- ರೂ, 52 ಇಸ್ಪೇಟ್ ಎಲೆಗಳು ಜಪ್ತಿಪಡಿಸಿಕೊಂಡು ಠಾಣೆಗೆ ಬಂದು ಮುಂದಿನ ಕ್ರಮ ಕುರಿತು ವರದಿ ಸಲ್ಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 23-11-2021 10:01 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080