ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 24-07-2021

ಹುಣಸಗಿ ಪೊಲೀಸ್ ಠಾಣೆ
53/2021 78 (3) ಕೆ.ಪಿ ಯಾಕ್ಟ : : ದಿನಾಂಕ:23/07/2021 ರಂದು 15.10 ಪಿ.ಎಮ್ ಕ್ಕೆ, ಶ್ರೀ.ಬಾಪುಗೌಡ ಪಿಎಸ್ಐ ಹುಣಸಗಿ ಪೊಲೀಸ್ ಠಾಣೆ ರವರು ಠಾಣೆಗೆ ಹಾಜರಾಗಿ ಜ್ಞಾಪನ ಪತ್ರ ನೀಡಿದ್ದು ಇದ್ದು ಏನೆಂದರೆ, ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯ ವಜ್ಜಲ್ ಗ್ರಾಮದ ಗ್ರಾಮ ಪಂಚಾಯತಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಡುತ್ತಿರುವ ಹಾಗೂ ಜನರಿಗೆ ಕರೆದು ಒಂದು ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತಾ ಅನ್ನುತ್ತಾ ಮಟಕಾ ಜೂಜಾಟ ನಡೆಸುತ್ತಿದ್ದಾನೆ ಅಂತಾ ಖಚಿತ ಬಾತ್ಮಿ ಬಂದ ಮೆರೆಗೆ, ಮಟಕಾ ಬರೆದುಕೊಳ್ಳುವರ ಮೇಲೆ ಎಫ್.ಐ.ಆರ್ ದಾಖಲಿಸಲು ಮತ್ತು ದಾಳಿ ಮಾಡುವ ಕುರಿತು ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯ ಸುರಪುರವರಲ್ಲಿ ಪರವಾನಿಗೆ ಪಡೆದುಕೊಂಡಿದ್ದು, ಈ ಬಗ್ಗೆ ಎಫ್.ಐ.ಆರ್ ದಾಖಲಿಸಲು ಸೂಚಿಸಿದ ಆದೇಶದ ಮೇರೆಗೆ ಠಾಣೆ ಗುನ್ನೆ ನಂ:53/2021 ಕಲಂ. 78(3) ಕೆ.ಪಿ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸಿದ್ದು ಇರುತ್ತದೆ.

 

ಯಾದಗಿರ ಗ್ರಾಮೀಣ ಪೊಲೀಸ ಠಾಣೆ
ಯು.ಡಿ.ಆರ್. ನಂ 14/2021 ಕಲಂ 174 ಸಿ.ಆರ್.ಪಿ.ಸಿ : ಮೃತನು ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದು, ಸಾಲ ತಿರಿಸಲಾಗದೇ ಸರಾಯಿ ಕುಡಿಯುವ ಚಟ ಹಾಕಿಕೊಂಡಿದ್ದು ಇರುತ್ತದೆ, ದಿನಾಂಕ 20/07/2021 ರಂದು ಬೆಳಿಗ್ಗೆ 9-00 ಗಂಟೆಗೆ ಮೃತನಾದ ಸಿದ್ದಪ್ಪ ತಂದೆ ಶಿವಪ್ಪ ಹೊಸಮನಿ ಇತನು ಖಾಸಗಿಯಾಗಿ ಸಾಲ ಮಾಡಿದ್ದು ತಿರಿಸಲಾಗದೇ ಅದೇ ಮನಸ್ಸಿನ ಮೇಲೆ ಪರಿಣಾಮ ಮಾಡಿಕೊಂಡು ದಿನಾಂಕಃ 20/07/2021 ರಂದು ಬೆಳಿಗ್ಗೆ 9-00 ಗಂಟೆಗೆ ತನ್ನ ಮನೆಯಲ್ಲಿರುವಾಗ ಸಾಲ ಮಾಡಿದ ಬಗ್ಗೆ ಮನಸ್ಸಿನ ಮೇಲೆ ಪರಿಣಾಮ ಮಡಿಕೊಂಡು ಮನೆಯಲ್ಲಿಟ್ಟಿದ್ದ ಕ್ರೀಮಿನಾಶ ಔಷಧಿಯನ್ನು ಸೇವನೆ ಮಾಡಿ ಉಪಚಾರಕ್ಕಾಗಿ ಯಾದಗಿರಿ ಜಿಜಿಎಚ್ ಕ್ಕೆ ಸೇರಿಕೆಯಾಗಿ ಅಲ್ಲಿ ವೈಧ್ಯರ ಸಲಹೆ ಮೇರೆಗೆ ರಿಮ್ಸ ಆಸ್ಪತ್ರೆಗೆ ಸೆರಿಕೆಯಾಗಿ ಉಪಚಾರ ಪಡೆಯುತ್ತಾ ಉಪಚಾರ ಫಲಕಾರಿಯಾಗದೇ ದಿನಾಂಕ 22/07/2021 ರಂದು ರಾತ್ರಿ 9-40 ಗಂಟೆಗೆ ಆಸ್ಪತ್ರೆಯಲ್ಲಿ ಸತ್ತಿರುತ್ತಾನೆ, ಮೃತನ ಸಾವಿನಲ್ಲಿ ಯಾವುದೇ ಸಂಶಯವಿರುವದಿಲ್ಲ ಅಂತಾ ಪ್ರಕರಣ ದಾಖಲು ಆಗಿರುತ್ತದೆ.

ಇತ್ತೀಚಿನ ನವೀಕರಣ​ : 24-07-2021 10:45 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080