ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 27-10-2021

ಹುಣಸಗಿ ಪೊಲೀಸ್ ಠಾಣೆ
ಗುನ್ನೆ ನಂ: 80/2021 ಕಲಂ. 279, 337, 338, 304(ಎ) ಐಪಿಸಿ : ದಿ:26/10/2021 ರಂದು ಮದ್ಯಾಹ್ನ 3 ಗಂಟೆಯ ಸುಮಾರಿಗೆ ಆರೋಪಿತನು ತಾನು ಚಲಾಯಿಸು ಮೋಟಾರ್ ಸೈಕಲ್ ನಂ:ಕೆಎ-33 ಇಎ-8951 ನೇದ್ದರ ಮೇಲೆ ಹಿಂದೆ ಗಾಯಾಳುವಿಗೆ ಕೂಡಿಸಿಕೊಂಡು ಗುಳಬಾಳದಿಂದ ಹುಣಸಗಿ ಕಡೆಗೆ ಹೊರಟಾಗ ತಾಳಿಕೋಟಿ ಹುಣಸಗಿ ರಾಜ್ಯ ಹೆದ್ದಾರಿ ರಸ್ತೆಯ ಮಾಳನೂರ ಸೀಮಾಂತರದ ಇಮಾಮಸಾಬ ಮುಲ್ಲಾ ಈತನ ಹೊಲದ ಹತ್ತಿರ ಅತೀವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿ ನಿಯಂತ್ರಣ ತಪ್ಪಿ ಆರೋಪಿತನು ಒಮ್ಮೆಲೆ ಮೋಟಾರ್ ಸೈಕಲ್ ಬ್ರೆಕ್ ಹಾಕಿದ್ದರಿಂದ ಮೋಟಾರ್ ಸೈಕಲ್ ಹಿಂದೆ ಕುಳಿದ ಗಾಯಾಳು ರುದ್ರೌಡ ಈತನು ಆಯ ತಪ್ಪಿ ಕೆಳಗೆ ಬಿದ್ದು, ತಲೆಗೆ ಭಾರಿ ಒಳಪೆಟ್ಟಾಗಿ ಬೇವುಸಾಗಿದ್ದಾಗ ಹಿಂದೆ ಹೊರಟ ಪಿರ್ಯಾದಿಯು ನೋಡಿ ತನ್ನ ಕಾರನಲ್ಲಿ ಹಾಕಿಕೊಂಡು ವಿಜಯಪೂರ ಸಂಜೀವಿನಿ ಆಸ್ಪತ್ರೆಗೆ ಒಯ್ದು ಇಲಾಜು ಕುರಿತು ಸೇರಿಕೆ ಮಾಡಿ ವಾಪಸು ಠಾಣೆಗೆ ಬಂದು ದೂರು ನೀಡಿದ್ದು ಇರುತ್ತದೆ. ಇಂದು ದಿ:27/10/2021 ರಂದು ಬೆಳಿಗ್ಗೆ 6.30 ಗಂಟೆಗೆ ಪ್ರಕರಣದ ಪಿರ್ಯಾಧಿಯು ಠಾಣೆಗೆ ಹಾಜರಾಗಿ ಪುರವಣಿ ಹೇಳಿಕೆ ಕೊಟ್ಟಿದ್ದೆನೆಂದರೇ, ವಿಜಯಪೂರ ಸಂಜೀವಿನಿ ಆಸ್ಪತ್ರೆಯಲ್ಲಿ ರುದ್ರಗೌಡ ಈತನು ಇಲಾಜು ಹೊಂದುತ್ತಾ ಗುಣಮುಖವಾಗದೆ ಇಂದು ದಿನಾಂಕ:27/10/2021 ರಂದು ಬೆಳಿಗ್ಗೆ 03.05 ಎ.ಎಮ್ ಕ್ಕೆ ಮೃತಪಟ್ಟಿದ್ದು ಇರುತ್ತದೆ. ನಂತರ ನಾನು ವಿಜಯಪೂರ ಸಂಜೀವಿನಿ ಆಸ್ಪತ್ರೆಯಿಂದ ಠಾಣೆಗೆ ಬಂದಿದ್ದು ಇರುತ್ತದೆ. ಕಾರಣ ಮಾನ್ಯರು ತಾವು ಮುಂದಿನ ಕಾನೂನ ಕ್ರಮ ಕೈಕೊಳ್ಳಬೇಕು ಅಂತಾ ಇತ್ಯಾದಿ ಪುರವಣಿ ಹೇಳಿಕೆ ಕೊಟ್ಟಿದ್ದು ಇರುತ್ತದೆ. ಕಾರಣ ಸದರಿ ಪ್ರಕರಣದಲ್ಲಿ ಕಲಂ.304(ಎ) ಐಪಿಸಿ ಅಳವಡಿಸಿಕೊಳ್ಳಲು ಪರವಾನಿಗೆ ಕುರಿತು ಮಾನ್ಯ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದು ಇರುತ್ತದೆ ಅಂತಾ ಪ್ರಕರಣದಲ್ಲಿ ಈ ಶೀಘ್ರವರದಿಯನ್ನು ಸಲ್ಲಿಸಲಾಗುತ್ತಿದೆ.

ಇತ್ತೀಚಿನ ನವೀಕರಣ​ : 27-10-2021 10:04 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080