ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 28-08-2022


ಹುಣಸಗಿ ಪೊಲೀಸ್ ಠಾಣೆ:-
ಗುನ್ನೆ ನಂ: 68/2022 ಕಲಂ 3 & 7 ಇಸಿ ಯಾಕ್ಟ : 27/08/2022 ರಂದು ರಾತ್ರಿ 20.30ಗಂಟೆಯ ಸುಮಾರಿಗೆ ಪಿರ್ಯಾದಿಗ ಹುಣಸಗಿ ಪಟ್ಟಣದ ದೊರಿಗೋಳ ಓಣಿಯಲ್ಲಿ ಆರೋಪಿ ಮುದಕಪ್ಪನು ತನ್ನ ಮನೆಯಲ್ಲಿ ಅಕ್ರಮವಾಗಿ ಪಿ.ಡಿ.ಎಸ್. ಅಕ್ಕಿಯನ್ನು ಸಂಗ್ರಹಣೆ ಮಾಡಿದ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ಇಬ್ಬರೂ ಸರಕಾರಿ ಪಂಚರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ ಸುಮಾರು 65 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ಕಿಯನ್ನು ತುಂಬಿ ಬಾಯಿ ಕಟ್ಟಿದ್ದು ಇದ್ದು, ಸದರಿ ಅಕ್ಕಿಯ ಬಗ್ಗೆ ಆರೋಪಿತ ಮುದಕಪ್ಪ ಈತನಿಗೆ ವಿಚಾರಿಸಲು ತಿಳಿಸಿದ್ದೇನೆಂದರೆ, ನಾನು ಸಾರ್ವಜನಿಕರಿಂದ ಕಡಿಮೆ ದರಕ್ಕೆ ಅಕ್ಕಿ ಖರೀಧಿ ಮಾಡಿ ನಮ್ಮ ಮನೆಯಲ್ಲಿ ಸಂಗ್ರಹಣೆ ಮಾಡಿ ಹೆಚ್ಚಿನ ದರಕ್ಕೆ ಅಕ್ಕಿಯನ್ನು ಕೊಡೇಕಲ್ ಗ್ರಾಮದ ಬಸಯ್ಯ ತಂದೆ ಸಂಗಯ್ಯ ಮಠಪತಿ ಮತ್ತು ಗೊಲ್ಲಾಳಪ್ಪ ಸಾ: ತಾಳಿಕೋಟಿ ಇವರಿಗೆ ಮಾರಾಟ ಮಾಡುತ್ತೇನೆ ಅಂತಾ ತಿಳಿಸಿದ್ದರಿಂದ ಪಂಚರ ಸಮಕ್ಷಮದಲ್ಲಿ 65 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ಕಿಯನ್ನು ಜಪ್ತಿ ಮಾಡಿಕೊಂಡು ಒಂದು ಖಾಸಗಿ ವಾಹನದಲ್ಲಿ ಹಾಕಿಕೊಂಡು ವೇ ಬ್ರೀಡ್ಜ್ದಲ್ಲಿ ತೂಕ ಮಾಡಿಸಿದ್ದು, ಒಟ್ಟು 3030 ಕೆ.ಜಿ ಅಕ್ಕಿ ಅ:ಕಿ:72720/- ರೂ.ಗಳ ಅಕ್ಕಿಯನ್ನು ಪಂಚರ ಸಮಕ್ಷಮದಲ್ಲಿ ಜಪ್ತಿ ಮಾಡಿಕೊಂಡು ಠಾಣೆಗೆ 23.30 ಗಂಟೆಗೆ ಬಂದು ದೂರು ನೀಡಿದ್ದು, ದೂರಿನ ಆಧಾರದ ಮೇಲಿಂದ ಠಾಣೆ ಗುನ್ನೆ ನಂ:68/2022 ಕಲಂ. 3 & 7 ಇಸಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 28-08-2022 11:31 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080