ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 30-07-2022


ಯಾದಗಿರಿ ನಗರ ಪೊಲೀಸ್ ಠಾಣೆ:-
ಗುನ್ನೆ ನಂ: 90/2022 ಕಲಂ 78(3) ಕೆ.ಪಿ ಎಕ್ಟ್ 1963 : ಇಂದು ದಿನಾಂಕ. 29/07/2022 ರಂದು 05-15 ಪಿಎಂಕ್ಕೆ ಶ್ರೀ ಚಂದ್ರಶೇಖರ ಪಿ.ಎಸ್.ಐ ಕಾ.ಸೂ ಯಾದಗಿರಿ ನಗರ ಠಾಣೆ ರವರು ಆರೋಪಿ ಮತ್ತು ಮುದ್ದೆ ಮಾಲಿನೊಂದಿಗೆ ಠಾಣೆಗೆ ಬಂದು ಜ್ಞಾಪನ ಹಾಗೂ ಜಪ್ತಿ ಪಂಚಾನಾಮೆ ಒಪ್ಪಿಸಿದ್ದರ ಸಾರಾಂಶವೆನಂದರೆ, ಇಂದು ದಿನಾಂಕ: 29/07/2022 ರಂದು 3-00 ಪಿಎಂಕ್ಕೆ ನಾನು ಯಾದಗಿರಿ ನಗರ ಠಾಣೆಯಲ್ಲಿದ್ದಾಗ ಯಾರೋ ಒಬ್ಬನು ಯಾದಗಿರಿ ನಗರದ ಮೈಲಾಪೂರ ಭೇಸ್ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತುಕೊಂಡು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ನಂಬರಗಳನ್ನು ಬರೆದುಕೊಳ್ಳುತ್ತಿರುವ ಬಗ್ಗೆ ಖಚಿತ ಭಾತ್ಮಿ ಬಂದ ಮೇರೆಗೆ ನಾನು ಮತ್ತು ಸಿಬ್ಬಂದಿಯವರು ಹಾಗೂ ಇಬ್ಬರೂ ಪಂಚರು ಕೂಡಿಕೊಂಡು ಹೋಗಿ 4-00 ಪಿಎಂಕ್ಕೆ ಹೋಗಿ ದಾಳಿ ಮಾಡಿ ಆರೋಪಿತನಿಗೆ ಹಿಡಿದು ವಿಚಾರಿಸಲು ಅವನು ತನ್ನ ಹೆಸರು ಸಾಬಣ್ಣ ತಂದೆ ಮುಕಪ್ಪ ವಯಾ:36 ಜಾತಿ:ಕೊರವರ ಉ: ಬ್ಯಾಂಡ ಬಾರಿಸುವ ಕೆಲಸ ಸಾ: ಅರಕೇರಿ ತಾ:ಜಿ: ಯಾದಗಿರಿ ಅಂತಾ ತಿಳಿಸಿದ್ದು ನಂತರ ಆತನ ಅಂಗಶೋಧನೆ ಮಾಡಲಾಗಿ ಸದರಿಯವನ ಹತ್ತಿರ 1) 1020=00 ನಗದು ಹಣ 2) ಒಂದು ಮಟಕಾ ಚೀಟಿ ಅಂ.ಕಿ.00-00, 3) ಒಂದು ಬಾಲ ಪೆನ್ ಅಂ.ಕಿ.00-00 ಸಿಕ್ಕಿದ್ದು ಸದರಿ ಮುದ್ದೆಮಾಲನ್ನು ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡು ಜಪ್ತಿ ಪಂಚನಾಮೆಯನ್ನು ಇಂದು ದಿನಾಂಕ. 29/07/2022 ರಂದು 04-00 ಪಿಎಂ ದಿಂದ 05-00 ಪಿಎಂ ದವರೆಗೆ ಸ್ಥಳದಲ್ಲಿ ಲ್ಯಾಪಟಾಪದಲ್ಲಿ ಗಣಕೀಕರಣ ಮಾಡಿ ಮುಗಿಸಿದ್ದು ನಂತರ ಆರೋಪಿ ಮತ್ತು ಮುದ್ದೆಮಾಲಿನೊಂದಿಗೆ ಜಪ್ತಿಪಂಚನಾಮೆಯನ್ನು ಮುಗಿಸಿಕೊಂಡು ಮರಳಿ ಠಾಣೆಗೆ 05-15 ಪಿಎಂಕ್ಕೆ ಬಂದು ಮುಂದಿನ ಕ್ರಮಕ್ಕಾಗಿ ಯಾದಗಿರಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿರವರಿಗೆ ಜ್ಞಾಪನಾ ಪತ್ರದೊಂದಿಗೆ ಒಪ್ಪಿಸಿದ್ದು ಇರುತ್ತದೆ. ಸದರಿ ಆರೋಪಿ ವಿರುದ್ದ ಕ್ರಮ ಜರುಗಿಸಲು ಈ ಮೂಲಕ ಸೂಚಿಸಲಾಗಿದೆ. ಅಂತಾ ಕೊಟ್ಟ ಜ್ಞಾಪನದ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ. 90/2022 ಕಲಂ.78(3)ಕೆಪಿ ಆಕ್ಟ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು


ಶಹಾಪೂರ ಪೊಲೀಸ್ ಠಾಣೆ:-
ಗುನ್ನೆ ನಂ 136/2022.ಕಲಂಃ 420.ಐ.ಪಿ.ಸಿ. ಮತ್ತು 78(3) ಕೆ.ಪಿ.ಆ್ಯಕ್ಟ : ಇಂದು ದಿನಾಂಕ 29/07/2022 ರಂದು 12-30 ಗಂಟೆಗೆ ಸ|| ತ|| ಪಿಯರ್ಾದಿ ಶ್ರೀ ಶಾಮಸುಂದರ ಪಿ.ಎಸ್.ಐ. ಸಾಹೇಬರು ಒಬ್ಬ ಆರೋಪಿ, ಮುದ್ದೆಮಾಲು, ಜಪ್ತಿ ಪಂಚನಾಮೆಯೊಂದಿಗೆ ಠಾಣೆಗೆ ಹಾಜರಾಗಿ ವರದಿ ನೀಡಿದ್ದರ ಸಾರಾಂಶವೆನೆಂದರೆ, ಇಂದು ದಿನಾಂಕ 29/07/2022 ರಂದು ಬೆಳಿಗ್ಗೆ 9-00 ಗಂಟೆಗೆ ನಾನು ಠಾಣೆಯಲ್ಲಿದ್ದಾಗ ಶಹಾಪೂರ ನಗರದ ದೇವಿನಗರದ ಮರೇಮ್ಮ ದೇವಿಗುಡಿಯ ಮುಂದೆ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಒಬ್ಬ ವ್ಯೆಕ್ತಿ ಸಾರ್ವಜನಿಕರಿಗೆ ಕೂಗಿ ಕರೆಯುತ್ತ ಮತ್ತು ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಂಡು ಸಾರ್ವಜನಿಕರಿಗೆ ಮೋಸ ಮಾಡುತಿದ್ದಾನೆ ಅಂತ ಮಾಹಿತಿ ಬಂದಮೇರೆಗೆ ಠಾಣೆಯ ಸಿಬ್ಬಂದಿಯವರಾದ ಶರಣಪ್ಪ ಹೆಚ್.ಸಿ.164. ನಾಗರಾಜ ಪಿ.ಸಿ.12, ನೀಲಪ್ಪ ಪಿ.ಸಿ.44. ಧರ್ಮರಾಜ ಪಿ.ಸಿ.45. ರವರಿಗೆ ಮಾಹಿತಿ ವಿಷಯ ತಿಳಿಸಿ. ಅವರಲ್ಲಿ ನಾಗರಾಜ ಪಿ.ಸಿ.12, ರವರಿಗೆ 9-10 ಗಂಟೆಗೆ ಇಬ್ಬರು ಪಂಚರನ್ನು ಕರೆದು ಕೊಂಡು ಬರಲು ಕಳಿಸಿದ್ದರಿಂದ ಸದರಿಯವರು ಇಬ್ಬರೂ ಪಂಚರಾದ 1] ರಾಜೇಂದ್ರ ತಂದೆ ಮಲ್ಲೇಶಪ್ಪ ಹೋಸಮನಿ ವ|| 23 ಜಾ|| ಪ.ಜಾತಿ (ಮಾದಿಗ) ಉ|| ಕೂಲಿ ಸಾ|| ದೇವಿನಗರ ಶಹಾಪೂರ 2] ಪ್ರಶಾಂತ ತಂದೆ ನಾಗರಾಜ ತಡಿಬಿಡಿ ವ|| 22 ಜಾ|| ಪ.ಜಾತಿ (ಹರಿಜನ) ಉ|| ಕೂಲಿ ಸಾ|| ದೇವಿನಗರ ಶಹಾಪೂರ. ಇವರನ್ನು ಕರೆದುಕೊಂಡು ಬಂದು ನನ್ನ ಮುಂದೆ 9-20 ಗಂಟೆಗೆ ಹಾಜರಪಡಿಸಿದ್ದು ಸದರಿಯವರಿಗೆ ಮೇಲ್ಕಂಡ ಬಾತ್ಮಿಯ ವಿಷಯ ತಿಳಿಸಿ ದಾಳಿ ಕುರಿತು ಹೋಗುವುದಿದೆ ತಾವು ನಮ್ಮ ಜೊತೆಯಲ್ಲಿ ಬಂದು ಜಪ್ತಿ ಪಂಚನಾಮೆಯ ಪಂಚರಾಗಿ ಸಹಕರಿಸಬೇಕು ಅಂತಾ ಕೇಳಿಕೊಂಡ ಮೇರೆಗೆ ಪಂಚರಾಗಿ ನಮ್ಮ ಜೊತೆಯಲ್ಲಿ ಬರಲು ಒಪ್ಪಿಕೊಂಡರು.ಮೇಲಾಧಿಕಾರಿಗಳ ಮಾರ್ಗದಶನದಲ್ಲಿ ಸದರಿಯವನ ಮೇಲೆ ದಾಳಿ ಮಾಡಲು ನಾನು ಪಂಚರು ಸಿಬ್ಬಂದಿಯವರು ಒಂದು ಖಾಸಗಿ ವಾಹನದಲ್ಲಿ ಕುಳಿತುಕೊಂಡು ಠಾಣೆಯಿಂದ 9-30 ಗಂಟೆಗೆ ಹೊರಟು ದೇವಿನಗರದ ಮರೇಮ್ಮ ದೇವಿಯಗುಡಿಯ ಹತ್ತಿರ ಸ್ವಲ್ಪ ದೂರದಲ್ಲಿ 9-40 ಗಂಟೆಗೆ ಹೊಗಿ ವಾಹನ ನಿಲ್ಲಿಸಿ. ವಾಹನದಿಂದ ಈ ಮೇಲ್ಕಂಡ ನಾವೆಲ್ಲರು ಇಳಿದು ಮರೆಮ್ಮ ದೇವಿ ಗುಡಿಯ ಹತ್ತಿರ ಹೋಗಿ ಅಂಗಡಿ ಮತ್ತು ಹೋಟೆಲ್ಗಳ ಮರೆಯಲ್ಲಿ ನಿಂತು ನಿಗಾಮಾಡಿ ನೊಡಲಾಗಿ ಮರೇಮ್ಮ ದೇವಿಗುಡಿಯ ಮುಂದೆ ಇರುವ ಸಾರ್ವಜನಿಕ ಕುಲ್ಲಾ ಜಾಗೆಯಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ ಇದು ಬಾಂಬೆ ಮಟಕಾ 1 ರೂ ಆಡಿದರೆ 80 ರೂಪಾಯಿ ಬರುತ್ತದೆ ಅಂತ ಹೇಳಿ ಸಾರ್ವಜನಿಕರಿಗೆ ಕೂಗಿ ಕರೆಯುತ್ತ ಮತ್ತು ಸಾರ್ವಜನಿಕರಿಂದ ಹಣ ಪಡೆದು ಸಾರ್ವಜನಿಕರಿಗೆ ಮೋಸ ಮಾಡಿ ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತಿದ್ದನು. ಆಗ ನಾವೆಲ್ಲರೂ ಸದರಿಯವನು ಮಟಕಾ ಅಂಕಿಗಳನ್ನು ಬರೆದುಕೊಳ್ಳುತಿದ್ದ ಬಗ್ಗೆ ಖಚಿತಪಡಿಸಿಕೊಡು 10-00 ಗಂಟೆಗೆ ನಾವೆಲ್ಲರೂ ದಾಳಿ ಮಾಡಿದಾಗ. ಸಾರ್ವಜನಿಕರಿಗೆ ಕೂಗಿ ಕರೆಯುತ್ತ ಹಣ ಪಡೆದು ಸಾರ್ವಜನಿಕರಿಗೆ ಮೋಸ ಮಾಡಿ ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತಿವನು ಸಿಕ್ಕಿಬಿದ್ದಿದ್ದು. ಮಟಕಾ ಅಂಕಿಸಂಖ್ಯೆಗಳನ್ನು ಬರೆಸಲು ಬಂದ ಜನರು ಓಡಿ ಹೋಗಿರುತ್ತಾರೆ. ಆಗ ನಾನು ದಾಳಿಯಲ್ಲಿ ಸಿಕ್ಕ ವ್ಯಕ್ತಿಯ ಹೆಸರು ವಿಳಾಸ ವಿಚಾರಿಸಲು ಅವನು ತನ್ನ ಹೆಸರು ಶಿವುಕುಮಾರ ತಂದೆ ಭೀಮರಾಯ ದರಿಯಾಪೂರ ವ|| 25 ಜಾ|| ಪ.ಜಾತಿ. (ಮಾದಿಗ) ಉ|| ಮಟಕಾ ನಂಬರ ಬರೆದುಕೊಳ್ಳೂರವುದು. ಸಾ|| ದೇವಿನಗರ ಶಹಾಪೂರ ಅಂತ ಹೇಳಿದನು. ಈತನ ಹತ್ತಿರ 1) ನಗದು ಹಣ 820=00 ರೂಪಾಯಿ ಇದ್ದು ಅವುಗಳನ್ನು ವಿಂಗಡನೆ ಮಾಡಿ ನೋಡಲಾಗಿ 100 ರೂಪಾಯಿ ಮುಖ ಬೆಲೆಯ 7 ನೋಟುಗಳು, 50 ರೂಪಾಯಿ ಮುಖ ಬೆಲೆಯ 2 ನೋಟುಗಳು, 10 ರೂಪಾಯಿ ಮುಖ ಬೆಲೆಯ 2 ನೋಟುಗಳು ಇದ್ದು, 2) ಒಂದು ಮಟಕಾ ನಂಬರ ಬರೆದುಕೊಂಡಿದ್ದ ಚೀಟಿ ಇರುತ್ತದೆ ಅ.ಕಿ 00-00. 3) ಒಂದು ಬಾಲ್ ಪೆನ್ ಸಿಕ್ಕಿದು,್ದ ಅ.ಕಿ 00-00 ಸದರಿಯವನಿಗೆ ವಿಚಾರಣೆ ಮಾಡಲಾಗಿ, ಸಾರ್ವಜನಿಕರಿಂದ ಹಣ ಪಡೆದು ಮಟಕಾ ಅಂಕಿ ಸಂಖ್ಯೆಗಳು ಬರೆದುಕೊಂಡ ಚೀಟಿ ಮತ್ತು ಮಟಕಾ ನಂಬರಗಳು ಬರೆಯಲು ಉಪಯೋಗಿಸಿದ ಪೆನ್ನು ಇದೆ ಇರುತ್ತದೆ. ಸದರಿ ಹಣ ಮಟಕಾ ಅಂಕಿ ಸಂಖೆಗಳನ್ನು ಬರೆದುಕೊಂಡಿದ್ದರಿಂದ ಜಮಾ ಆದ ಹಣ ಇರುತ್ತವೆ ಅಂತಾ ಹೇಳಿ ಹಾಜರ ಪಡಿಸಿದನು. ಸದರಿ ಮುದ್ದೆಮಾಲುಗಳನ್ನು ಒಂದು ಲಕೋಟೆಯಲ್ಲಿ ಹಾಕಿಕೊಂಡು, ನಾನು ಮತ್ತು ಪಂಚರು ಸಹಿ ಮಾಡಿದ ಚೀಟಿ ಅಂಟಿಸಿ ಕೇಸಿನ ಪುರಾವೆ ಕುರಿತು ತೆಗೆದುಕೊಂಡೆನು. ಸದರಿ ಜಪ್ತಿ ಪಂಚನಾಮೆಯನ್ನು 10-00 ರಿಂದ 11-00 ಗಂಟೆಯವರೆಗೆ ಜಪ್ತಿ ಪಂಚನಾಮೆಮಾಡಿ. ದಾಳಿಯಲ್ಲಿ ಸಿಕ್ಕ ವ್ಯಕ್ತಿಯನ್ನು ತಾಬೆಗೆ ತೆಗೆದು ಕೊಂಡು ಎಲ್ಲರೂ ಕೂಡಿ ಮರಳಿ ಠಾಣೆಗೆ 11-30 ಗಂಟೆಗೆ ಬಂದು ಜಪ್ತಿ ಪಂಚನಾಮೆ, ಮುದ್ದೆಮಾಲನ್ನು ಮತ್ತು ಒಬ್ಬ ಆರೋಪಿಯನ್ನು ಹಾಜರು ಪಡಿಸಿ ಒಂದು ವರದಿಯನ್ನು ತಯಾರಿಸಿ 12-30 ಗಂಟೆಗೆ ವರದಿಯನ್ನು ತಯ್ಯಾರಿಸಿ ಮುಂದಿನ ಕ್ರಮಕೈಕೊಳ್ಳುವಂತೆ ವರದಿ ಹಾಜರಪಡಿಸಿದ್ದು ಸದರಿ ವರದಿಯ ಸಾರಾಂಶದ ಮೇಲಿಂದ ಗುನ್ನೆ ನಂಬರ 136/2022 ಕಲಂ.420. ಐ.ಪಿ.ಸಿ. ಮತ್ತು 78(3) ಕೆ.ಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿ ಕೊಂಡು ತನಿಕೆ ಕೈಕೊಂಡೆನು.


ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ:-
ಗುನ್ನೆ ನಂ: 115/2022 ಕಲಂ 379 ಐಪಿಸಿ: ಇಂದು ದಿನಾಂಕ: 29-07-2022 ರಂದು ಮಧ್ಯಾಹ್ನ 12-35 ಗಂಟೆಗೆ ಶ್ರೀ ರಾಜಕುಮಾರ ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ಹತ್ತಿಕುಣಿ ಗ್ರಾಮದ ಹಳ್ಳದಿಂದ ಟಿಪ್ಪರದಲ್ಲಿ ಕಳ್ಳತನದಿಂದ ಮರಳನ್ನು ತುಂಬಿಕೊಂಡು ಹೋಗುತ್ತಿರುವಾಗ ಟಿಪ್ಪರ & ಮರಳನ್ನು ಜಪ್ತಿ ಮಾಡಿಕೊಂಡು ಜಪ್ತಿಪಂಚನಾಮೆಯೊಂದಿಗೆ ವರದಿಯನ್ನು ತಂದು ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕುರಿತು ಒಪ್ಪಿಸಿದ್ದು. ಸದರಿ ಜಪ್ತಿಪಂಚನಾಮೆಯ ಮತ್ತು ವರದಿಯ ಆಧಾರದ ಮೇಲಿಂದ ಠಾಣಾ ಗುನ್ನೆ ನಂ.115/2022 ಕಲಂ 379 ಐಪಿಸಿ ನೆದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.


ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ:-
ಗುನ್ನೆ ನಂ: 116/2022 ಕಲಂ 78 (3) ಕೆ.ಪಿ ಕಾಯ್ದೆ & 420 ಐಪಿಸಿ : ದಿನಾಂಕ: 29-07-2022 ರಂದು ಸಾಯಂಕಾಲ 06-00 ಗಂಟೆಗೆ ಶ್ರೀ ರಾಜಕುಮಾರ ಪಿ.ಎಸ್.ಐ ಸಾಹೇಬರು ಠಾಣೆಗೆ ಹಾಜರಾಗಿ ರಾಮಸಮುದ್ರ ಗ್ರಾಮದ ಬಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೋಡಗಿದ ಆರೋಪಿತನಿಗೆ ದಾಳಿಮಾಡಿ ಪಂಚರ ಸಮಕ್ಷಮದಲ್ಲಿ ಹಿಡಿದುಕೊಂಡು ಅವನಿಂದ ನಗದು ಹಣ 2520=00 ರೂಪಾಯಿಗಳು, ಮಟಕಾ ಬರೆದ ಚೀಟಿ ಪೆನ್ನು ಜಪ್ತಿ ಮಾಡಿಕೊಂಡು. ಬಂದು ಜಪ್ತಿ ಪಂಚನಾಮೆ ಆರೋಪಿತನನ್ನು ಮತ್ತು ಮುದ್ದೆಮಾಲುಗಳನ್ನು ಹಾಜರುಪಡಿಸಿದ್ದು ಸದರಿ ಜಪ್ತಿ ಪಂಚನಾಮೆಯ ಸಾರಂಶದ ಆಧಾರದ ಮೇಲಿಂದ ಠಾಣಾ ಗುನ್ನೆ ನಂ.116/2022 ಕಲಂ.78(3) ಕೆ.ಪಿ ಕಾಯ್ದೆ & 420 ಐಪಿಸಿ ನೆದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡೆನು.


ಗುರಮಿಠಕಲ್ ಪೊಲೀಸ್ ಠಾಣೆ:-
ಗುನ್ನೆ ನಂ: 124/2022 ಕಲಂ 279, 337, 338 ಐಪಿಸಿ ಮತ್ತು ಕಲಂ. 187 ಐ.ಎಮ.ವಿ.ಎಕ್ಟ : ಈ ಪ್ರಕರಣದಲ್ಲಿ ಫಿಯರ್ಾದಿ ಮತ್ತು ಗಾಯಾಳು ಜನರು ಕೂಡಿ ಮೋಟಾರ ಸೈಕಲ ನಂ.ಕೆ.ಎ-33-ವೈ-3798 ನೇದ್ದರ ಮೇಲೆ ಹಿಮ್ಲಾಪೂರ ಗ್ರಾಮದಿಂದ ಗುರುಮಠಕಲ್ ಕಡೆಗೆ ಬರುತ್ತಿರುವಾಗ ದಿನಾಂಕಃ 29.07.2022 ರಂದು 7-15 ಪಿ.ಎಮ ಸುಮಾರಿಗೆ ಗುರುಮಠಕಲ್ ಸೀಮಾಂತರದಲ್ಲಿರುವ ಉಟ್ಕೂರ ಭೀಮರೆಡ್ಡಿ ಇವರ ಹೊಲದ ಹತ್ತಿರ ಗುರುಮಠಕಲ್-ಚಪೇಟ್ಲಾ ಮುಖ್ಯ ರಸ್ತೆಯ ಮೇಲೆ ಗುರುಮಠಕಲ್ ಕಡೆಯಿಂದ ಒಂದು ಬಿಳಿ ಬಣ್ಣದ ಕಾರ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಲಕ್ಷ್ಯತನದಿಂದ ನಡೆಯಿಸಿಕೊಂಡು ಬಂದು ಸದರಿ ಮೋಟಾರ ಸೈಕಲಗೆ ಡಿಕ್ಕಿ ಹೊಡೆದು ಕಾರ ಸಮೇತ ಓಡಿ ಹೋಗಿದ್ದರಿಂದ ಈ ಅಪಘಾತದಲ್ಲಿ ಮೋಟಾರ ಸೈಕಲ ಮೇಲಿದ್ದ ಫಿಯರ್ಾದಿ ಮತ್ತು ಇನ್ನಿಬ್ಬರಿಗೆ ಭಾರಿ ಮತ್ತು ಸಾದಾ ಸ್ವರೂಪದ ರಕ್ತ ಮತ್ತು ಗುಪ್ತಗಾಯಗಳಾಗಿರುತ್ತವೆ.


ಗೋಗಿ ಪೊಲೀಸ್ ಠಾಣೆ:-
ಗುನ್ನೆ ನಂ: 55/2022 ಕಲಂ, 87 ಕೆ.ಪಿ.ಆ್ಯಕ್ಟ್ ಮತ್ತು 5 & 11 ಪ್ರಿವೆನ್ಷನ್ ಆಫ್ ಕ್ರುವಾಲಿಟಿ ಟು ಎನಿಮಲ್ ಯ್ಯಾಕ್ಟ್ : ಇಂದು ದಿನಾಂಕ: 29/07/2022 ರಂದು 05.00 ಪಿಎಮ್ ಕ್ಕೆ ಶ್ರೀ ಅಯ್ಯಪ್ಪ ಪಿಎಸ್ಐ ಗೋಗಿ ಪೊಲೀಸ್ ಠಾಣೆ ರವರಿಗೆ ಬಾತ್ಮಿ ಬಂದ ಮೇರೆಗೆ ಮಾನ್ಯ ಡಿ.ಸ್.ಪಿ ಸಾಹೇಬರು ಸುರಪೂರ ಮತ್ತು ಮಾನ್ಯ ಸಿಪಿಐ ಸಾಹೇಬರು ಶಹಾಪೂರ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ರವರು ಪಂಚರು & ಸಿಬ್ಬಂದಿಯವರೊಂದಿಗೆ ಸರಕಾರಿ ಜೀಪ್ ನಂ: ಕೆಎ-33 ಜಿ-161 ಮತ್ತು ಒಂದು ಖಾಸಗಿ ವಾಹನದಲ್ಲಿ ಚಂದಾಪೂರ ಸೀಮಾಂತರ ಸೀಮಣಿ ಗುಡ್ಡದ ಕೆಳಗೆ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಹೋಗಿ ನೋಡಲಾಗಿ ಅಲ್ಲಿ ಕೆಲವು ಜನರು ದುಂಡಾಗಿ ನಿಂತು & ಕುಳಿತು ಮದ್ಯದಲ್ಲಿ ಹುಂಜಗಳಿಗೆ ಹಿಂಸೆಯಾಗುವ ರೀತಿಯಲ್ಲಿ ಅವುಗಳ ಕಾಲಿಗೆ ಚೂಪಾದ ಚಾಕು ಕಟ್ಟಿ ಹುಂಜಗಳಿಗೆ ಪಂಜೆ ಹಚ್ಚಿ ನಿನ್ನ ಹುಂಜ ಗೆದ್ದರೆ 200 ರೂಪಾಯಿಗೆ ನನ್ನ ಹುಂಜ ಗೆದ್ದರೆ 400 ರೂಪಾಯಿ ಕೊಡಬೇಕು ಅಂತಾ ಅವರವರಲ್ಲಿಯೇ ಮಾತನಾಡುತ್ತಾ ಹುಂಜದ ಪಂಜೆದ ಮುಖಾಂತರ ಜೂಜಾಟ ಆಡುತ್ತಿರುವಾಗ ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ ದಾಳಿ ಮಾಡಿದ್ದು ದಾಳಿಯಲ್ಲಿ 06 ಜನರು ಸಿಕ್ಕಿದ್ದು ಆರೋಪಿತರಿಂದ 6440/- ರೂ ನಗದು ಹಣ ಮತ್ತು ಕೋಳಿ ಪಂದ್ಯದ ಸಮಯದಲ್ಲಿ ಹುಂಜದ ಕಾಲಿಗೆ ಕಟ್ಟುವ 20 ಚಾಕುಗಳನ್ನು ಜಪ್ತಿ ಪಂಚನಾಮೆಯ ಮೂಲಕ ವಶಪಡಿಸಿಕೊಂಡು ಆರೋಪಿತರೊಂದಿಗೆ ಮುಂದಿನ ಕ್ರಮ ಕುರಿತು 08.15 ಪಿಎಮ್ ಕ್ಕೆ ಠಾಣೆಗೆ ಬಂದು ವರದಿ ನೀಡಿ ಸೂಕ್ತ ಕ್ರಮ ಕೈಕೊಳ್ಳುವಂತೆ ಆದೇಶಿಸಿದ ಮೇರೆಗೆ ಠಾಣೆ ಗುನ್ನೆ ನಂ: 55/2022 ಕಲಂ, 87 ಕೆ.ಪಿ.ಆ್ಯಕ್ಟ್ ಮತ್ತು 5 & 11 ಪ್ರಿವೆನ್ಷನ್ ಆಫ್ ಕ್ರುವಾಲಿಟಿ ಟು ಎನಿಮಲ್ ಯ್ಯಾಕ್ಟ್ ನೇದ್ದರ ಪ್ರಕಾರ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 30-07-2022 10:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080