ಅಭಿಪ್ರಾಯ / ಸಲಹೆಗಳು

                  ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 07/02/2021

ಯಾದಗಿರ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ:- 07/2021 ಕಲಂ 279, 337, 338, 304(ಎ) ಐಪಿಸಿ ಸಂ.187 ಐಎಂವಿ ಆ್ಯಕ್ಟ್ : ದಿನಾಂಕ 06/02/2021 ರಂದು ರಾತ್ರಿ 9-30 ಪಿ.ಎಂ.ದ ಸುಮಾರಿಗೆ ಯಾದಗಿರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಗಿರಿ-ಹೈದ್ರಾಬಾದ್ ಮುಖ್ಯ ರಸ್ತೆಯ ಮೇಲೆ ಬರುವ ಹಾವಿನಾಳ ಬ್ರಿಡ್ಜ್ (ಕೆ,ಎಸ್,ಆರ್,ಟಿ,ಸಿ ವರ್ಕಶಾಪ್) ಹತ್ತಿರ ಈ ಕೇಸಿನ ಪಿಯರ್ಾದಿ ಮತ್ತು ಮೃತ ಹಾಗೂ ಗಾಯಾಳುಗಳು ಸೇರಿಕೊಂಡು ಬೆಂಗಳೂರಿನಲ್ಲಿರುವ ಕುರಬರ ಎಸ್.ಟಿ. ಸೇರ್ಪಡೆ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ರಾಮಸಮುದ್ರ ಗ್ರಾಮದಿಂದ ಯಾದಗಿರಿಗೆ ಆಟೋ ಟಂ,ಟಂ ನಂಬರ ಕೆಎ-33, ಎ-5646 ನೇದ್ದರಲ್ಲಿ ಬರುವಾಗ ಯಾವುದೋ ಒಬ್ಬ ಲಾರಿ ಚಾಲಕನು ತನ್ನ ಲಾರಿಯನ್ನು ಅತೀವೇಗ ಮತ್ತು ಅಲಕ್ಷ್ಯತನದಿಂದ ನಡೆಸಿಕೊಂಡು ಬಂದವನೇ ಆಟೋವನ್ನು ಓವರ್ ಟೇಕ್ ಮಾಡುವಾಗ ತನ್ನ ಚಾಲನಾ ಮೇಲಿನ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿಕೊಟ್ಟು ಅಪಘಾತ ಮಾಡಿದ್ದರಿಂದ ಸದರಿ ಅಪಘಾತದಲ್ಲಿ ಆಟೋದಲ್ಲಿದ್ದವರ ಪೈಕಿ ಸಾದೇವಪ್ಪನಿಗೆ ತಲೆಗೆ, ಎದೆಗೆ ಭಾರೀ ಗುಪ್ತಗಾಯವಾಗಿ ಚಿಕಿತ್ಸೆ ಕುರಿತು ಯಾದಗಿರಿ ಸಕರ್ಾರಿ ಆಸ್ಪತ್ರೆಗೆ ಸೇರಿಕೆಯಾಗಿ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10-40 ಪಿ.ಎಂ.ಕ್ಕೆ ಮೃತಪಟ್ಟಿದ್ದು ಮತ್ತು ಆಟೋದಲ್ಲಿದ್ದ ಉಳಿದವರಿಗೆ ಭಾರೀ ರಕ್ತಗಾಯ ಮತ್ತು ಗುಪ್ತಗಾಯವಾಗಿದ್ದು ಇರುತ್ತದೆ. ಈ ಘಟನೆಯ ನಂತರ ಲಾರಿ ಚಾಲಕನು ತನ್ನ ಲಾರಿ ಸಮೇತ ಘಟನಾ ಸ್ಥಳದಿಂದ ಓಡಿ ಹೋಗಿರುತ್ತಾನೆ ಆತನ ಮೇಲೆ ಕಾನೂನಿನ ಸೂಕ್ತ ಕ್ರಮ ಜರುಗಿಸಿರಿ ಅಂತಾ ಹೇಳಿಕೆ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂಬರ 07/2021 ಕಲಂ 279, 337, 338, 304(ಎ) ಐಪಿಸಿ ಸಂ. 187 ಐಎಂವಿ ಆ್ಯಕ್ಟ್ ನೇದ್ದರಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 07-02-2021 11:50 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ