ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 16/04/2021

ಕೆಂಭಾವಿ ಪೊಲೀಸ್ ಠಾಣೆ :- 49/2021 ಕಲಂ: 78(3) ಕೆಪಿ ಯಾಕ್ಟ : ಶ್ರೀ ದೌಲತ್ ಎನ್ ಕೆ ಸಿಪಿಐ ಹುಣಸಗಿ ವೃತ್ತ ರವರು ಕೆಂಭಾವಿ ಪೊಲೀಸ್ ಠಾಣೆಗೆ ಹಾಜರಾಗಿ ವರದಿ ಸಲ್ಲಿಸಿದ್ದೆನೆಂದರೆ, ಇಂದು ದಿನಾಂಕ: 15.04.2021 ರಂದು 3.00 ಪಿಎಮ್ ಸುಮಾರಿಗೆ ನಾನು ಹಾಗು ನಮ್ಮ ವೃತ್ತದ ಸಿಬ್ಬಂದಿಯವರಾದ ಶಿವಪ್ಪ ಹೆಚ್ ಸಿ 136 ಹಾಗು ಬಸವರಾಜ ಪಿಸಿ 176 ಅಲ್ಲದೇ ಜೀಪ ಚಾಲಕನಾದ ವಿಕಾಸ ಎಪಿಸಿ-144 ರವರೊಂದಿಗೆ ಕೆಂಭಾವಿ ಪಟ್ಟಣದ ಮಕ್ಕಾ ಕ್ರಾಸ ಹತ್ತಿರ ಪೆಟ್ರೋಲಿಂಗ ಕರ್ತವ್ಯದಲ್ಲಿದ್ದಾಗ ಯಾಳಗಿ ಗ್ರಾಮದ ಬಸ್ಸ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತು ಸಾರ್ವಜನಿಕರಿಗೆ ಕರೆಯುತ್ತ ಬರ್ರಿ ಬರ್ರಿ ಬಾಂಬೆ ಮಟಕಾ ಇದೆ ಕಲ್ಯಾಣ ಮಟಕಾ ಇದೆ ಒಂದು ರೂಪಾಯಿಗೆ ಎಂಬತ್ತು ರೂಪಾಯಿ ಬರುತ್ತದೆ ಬಂದು ನಿಮ್ಮ ಅದೃಷ್ಟದ ನಂಬರ ಬರೆಯಿಸಿರಿ ಅಂತಾ ಕರೆದು ಸಾರ್ವಜನಿಕರಿಂದ ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದಾನೆ ಅಂತ ಬಾತ್ಮಿ ಬಂದ ಮೇರೆಗೆ ಹಾಗು ಯಾಳಗಿ ಗ್ರಾಮದ ಬೀಟ ಸಿಬ್ಬಂದಿಯವರಾದ ಸುಭಾಶ್ಚಂದ್ರ ಹೆಚ್ ಸಿ 137 ಮುಖಾಂತರ ಇಬ್ಬರು ಪಂಚರಾದ 1) ಶ್ರೀ ಮಡಿವಾಳಪ್ಪ ತಂದೆ ಕೆಂಚಪ್ಪ ದೊಡಮನಿ ವ|| 37 ಜಾ|| ಪರಿಶಿಷ್ಟ ಜಾತಿ ಉ|| ಕೂಲಿ ಸಾ|| ಕೆಂಭಾವಿ 2) ಮಕ್ತುಮ ತಂದೆ ಮಾಸುಮಸಾಬ ವಡಕೇರಿ ವ|| 36 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಇವರನ್ನು ಠಾಣೆಗೆ ಕರೆಯಿಸಿ ಅವರಿಗೂ ಸಹ ಬಾತ್ಮಿ ವಿಷಯ ತಿಳಿಸಿ ಸಿಬ್ಬಂದಿ ಹಾಗೂ ಪಂಚರೊಂದಿಗೆ ವೃತ್ತ ಕಛೇರಿಯ ಜೀಪ ನಂಬರ ಕೆಎ-33 ಜಿ-0228 ನೇದ್ದರಲ್ಲಿ ಠಾಣೆಯಿಂದ 03.30 ಪಿ.ಎಮ್ಕ್ಕೆ ಹೊರಟು 03.45 ಪಿ.ಎಮ್ಕ್ಕೆ ಯಾಳಗಿ ಗ್ರಾಮದ ಬಸ್ಸ ನಿಲ್ದಾಣದ ಹತ್ತಿರ ಮರೆಯಾಗಿ ನಿಂತು ನೋಡಲಾಗಿ ಅಲ್ಲಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ ಕರೆದು ಸಾರ್ವಜನಿಕರಿಂದ ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದುದನ್ನು ನೋಡಿ ಖಚಿತಪಡಿಸಿಕೊಂಡು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 3.50 ಪಿಎಮ್ಕ್ಕೆ ದಾಳಿ ಮಾಡಿದ್ದು ದಾಳಿಯಲ್ಲಿ ಒಬ್ಬ ವ್ಯಕ್ತಿ ಸಿಕ್ಕಿದ್ದು ಅವನ ಹೆಸರು ವಿಳಾಸ ವಿಚಾರಿಸಲಾಗಿ ದೇವಪ್ಪ ತಂದೆ ಭೀಮರಾಯ ಗೋಗಡಿಹಾಳ ವ|| 45 ಜಾ|| ಹಿಂದೂ ಬೇಡರ ಉ|| ಕೂಲಿ ಕೆಲಸ ಸಾ|| ಯಾಳಗಿ ತಾ|| ಸುರಪುರ ಅಂತ ತಿಳಿಸಿದ್ದು ಸದರಿಯವನಿಗೆ ಅಂಗಶೋಧನೆ ಮಾಡಲಾಗಿ ನಗದು ಹಣ 2100/- ರೂಪಾಯಿ, ಒಂದು ಮಟಕಾ ನಂಬರ ಬರೆದ ಚೀಟಿ, ಒಂದು ಬಾಲ ಪೆನ್ನು ಸಿಕ್ಕಿದ್ದು ಇವುಗಳನ್ನು 03.50[] ಪಿ.ಎಮ್ದಿಂದ 04.50 ಪಿ.ಎಮ್ ದವರೆಗೆ ಪಂಚರ ಸಮಕ್ಷಮ ವಶಪಡಿಸಿಕೊಂಡೆನು. ಸದರಿ ಆರೋಪಿತರ ವಿರುದ್ದ ಮುಂದಿನ ಕ್ರಮ ಜರುಗಿಸಲು ಆದೇಶಿಸಲಾಗಿದೆ ಅಂತ ವರದಿ ನೀಡಿದ್ದು, ಸದರಿ ವರದಿ ಆಧಾರದ ಮೇಲಿಂದ ಮಾನ್ಯ ನ್ಯಾಯಾಲಯದ ಪರವಾನಿಗೆ ಪಡೆದು 7.30 ಪಿಎಮ್ಕ್ಕೆ ಠಾಣಾ ಗುನ್ನೆ ನಂ 49/2021 ಕಲಂ: 78 (3) ಕೆಪಿ ಆಕ್ಟ ಪ್ರಕಾರ ಪ್ರಕರಣ ದಾಖಲಿಸಿ ತನಿಖೆ ಕೈಕೊಂಡೆನು.

ಶೋರಪೂರ ಪೊಲೀಸ್ ಠಾಣೆ:- 14/2021 ಕಲಂ: 110 (ಇ)&(ಜಿ) ಸಿ.ಆರ್.ಪಿ.ಸಿ : ಮಾನ್ಯರವರಲ್ಲಿ ಈ ಮೂಲಕ ನಿವೇದಿಸಿಕೊಳ್ಳುವುದೆನೆಂದರೆ, ನಾನು ಭಾಗಣ್ಣ ಎ.ಎಸ್.ಐ ಸುರಪೂರ ಪೊಲೀಸ ಠಾಣೆ, ಮಾನ್ಯರವಲ್ಲಿ ಸಲ್ಲಿಸುವ ವರದಿ ಏನಂದರೆ ಇಂದು ದಿನಾಂಕ:15/04/2021 ರಂದು 7 ಪಿ.ಎಂ ಸುಮಾರಿಗೆ ನಾನು ದೇವಿಕೇರಿ ಗ್ರಾಮದಲ್ಲಿ ಪೆಟ್ರೊಲಿಂಗ್ ಕರ್ತವ್ಯ ಮಾಡುತ್ತಾ 7:30 ಪಿ.ಎಮ್ ಸುಮಾರಿಗೆ ದೇವಿಕೇರಿ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ಮನುಷ್ಯನು ರಸ್ತೆಯಲ್ಲಿ ನಿಂತುಕೊಂಡು ಹೋಗಿ ಬರುವ ಸಾರ್ವಜನಿಕರಿಗೆ ಅವಾಚ್ಯವಾಗಿ ಬೈಯ್ಯುತ್ತಾ, ಅಸಭ್ಯವಾಗಿ ವತರ್ಿಸುತ್ತಾ, ಕೈಯಲ್ಲಿ ಕಲ್ಲು ಹಿಡಿದುಕೊಂಡು ಇವತ್ತು ಧಮ್ಮಿದ್ದರೆ ನನ್ನ ಹತ್ತಿರ ಬನ್ನಿ ಅಂತಾ ಅನ್ನುತ್ತಾ, ಹೋಗಿ ಬರುವ ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನುಂಟು ಮಾಡುತ್ತಾ ಏರಿಯಾದಲ್ಲಿ ಗುಂಡಾಗಿರಿ ವರ್ತನೆ ಪ್ರದಶರ್ಿಸಿ, ಏರಿಯಾದ ಜನರಿಗೆ ಕಿರಿಕಿರಿ ಮಾಡುತ್ತಿದ್ದು, ಸದರಿಯವನನ್ನು ಹಾಗೆಯೇ ಬಿಟ್ಟಲ್ಲಿ ದೇವಿಕೇರಿ ಗ್ರಾಮದಲ್ಲಿ ಕಿರಿಕಿರಿ ಮಾಡಿ ಶಾಂತತೆಗೆ ಭಂಗ ಉಂಟು ಮಾಡುವ ಸಾದ್ಯತೆ ಕಂಡು ಬಂದಿದ್ದರಿಂದ ಸದರಿಯವನನ್ನು ಸ್ಥಳದಲ್ಲಿಯೇ ವಶಕ್ಕೆ ತಗೆದುಕೊಂಡು ಅವರನ ಹೆಸರು ವಿಳಾಸ ವಿಚಾರಿಸಲು ಶಮರ್ುಸಾಬ ತಂದೆ ಖಾದರಸಾಬ ಸುರಪುರ ವ|| 45 ವರ್ಷ ಜಾ|| ಮುಸ್ಲಿಂ ಉ|| ಕೂಲಿ ಕೆಲಸ ಸಾ||ಮೈಹಿಬೂಬ ಸಾಬ ದಗರ್ಾ ಹಿಂದೂಗಡೆ ಹುಣಸಗಿ ಅಂತಾ ತಿಳಿಸಿದ್ದು ಸದರಿಯವನನ್ನು ಠಾಣೆಗೆ ತಂದಿದ್ದು ಇರುತ್ತದೆ. ಸದರಿಯವನು ಹೀಗೆ ಬಿಟ್ಟರೆ ಸಾರ್ವಜನಿಕರ ಶಾಂತತೆಗೆ ಭಂಗ ಉಂಟು ಮಾಡುವ ಸಾದ್ಯತೆ ಕಂಡು ಬಂದ್ದಿದ್ದರಿಂದ ಅವನ ವಿರುದ್ಧ ಮುಂಜಕಾಗೃತಾ ಕ್ರಮದ ಅಡಿಯಲ್ಲಿ ಕ್ರಮ ಜರೂಗಿಸುವ ತಮ್ಮ ಮುಂದೆ ಹಾಜರು ಪಡಿಸಿ ಈ ವರದಿಯನ್ನು ನಿವೇದಿಸಿಕೊಂಡಿದ್ದರ ಮೇಲಿಂದ ಮುಂಜಾಗೃತ ಕ್ರಮವಾಗಿ ಠಾಣೆಯ ಪಿ.ಎ.ಆರ್ ನಂ. 14/2021 ಕಲಂ 110 (ಇ)&(ಜಿ) ಸಿಆರ್ಪಿಸಿ ಪ್ರಕಾರ ಪ್ರಕರಣ ದಾಖಲು ಮಾಡಿ ಬಂಧನ ಕ್ರಮ ಜರುಗಿಸಿದ್ದು ಇರುತ್ತದೆ.

 

ಇತ್ತೀಚಿನ ನವೀಕರಣ​ : 16-04-2021 11:15 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ